ಕೋಲಾರ

ನಿರುದ್ಯೋಗಕ್ಕೆ ಸರ್ಕಾರದ ವೈಫಲ್ಯವೇ ಕಾರಣ

Published On :

ನಿರುದ್ಯೋಗಕ್ಕೆ ಸರ್ಕಾರದ ವೈಫಲ್ಯವೇ ಕಾರಣ


ಚಿಂತಾಮಣಿ: ನಿರುದ್ಯೋಗ ನಿರ್ಮೂಲನೆ ಮಾಡಲು ಸರ್ಕಾರ ವೈಫಲ್ಯವೇ ಕಾರಣವೆಂದು ಡಿವೈಎಫ್ಐ ರಾಜ್ಯ ಜಂಟಿ ಕಾರ್ಯದರ್ಶಿ ವೈ.ಸಂಪಂಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದರು.
ನಗರದ ಪ್ರವಾಸಿ ಮಂದಿರ ಸಭಾಂಗಣದಲ್ಲಿ ಭಾರತ ಪ್ರಜಾಸತಾತ್ಮಕ ಯುವಜನ ಫೆಡರೇಷನ್ ತಾಲೂಕು  ಸಮಿತಿ ವತಿಯಿಂದ ಶಾಶ್ವತ ನೀರಾವರಿ ಯೋಜನೆಗಳು ಹಾಗೂ ಅಸಿವು, ನಿರುದ್ಯೋಗ, ಬಡತನ,ಕೋಮುವಾದ ನಿರ್ಮೂಲನೆಗಾಗಿ ತಾಲೂಕು ಮಟ್ಟದ ಸಂಘಟನಾ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಾಗತೀಕರಣ ನೀತಿಗಳಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆಗಳು ತಾಂಡವಾಡುತ್ತಿದ್ದರೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಯುವ ಜನತೆಯ ಬಗ್ಗೆ ಕಾಳಜಿ ಇಲ್ಲದೆ ಅಧಿಕಾರಿ ದಾಹದಲ್ಲಿ ಕೆಸರೆರಚಾಟ ನಡೆಯುತ್ತಿದೆಯೆಂದು ಸಭೆಯಲ್ಲಿ ಟೀಕಿಸಿದರು. ಹಲವಾರು ಕೈಗಾರಿಕೆಗಳು ಹಾಗೂ ಬೃಹತ್ ಕೈಗಾರಿಕೆಗಳು ಮುಚ್ಚಲ್ಪಟ್ಟಿರುವುದರಿಂದ ಬಹು ರಾಷ್ಟ್ರೀಯ ಕಂಪನಿಗಳು ದೇಶದೆಲ್ಲೆಡೆ ವಿಜೃಂಭಿಸುತ್ತಾ ಯುವ ಜನ ವಿರೋಧಿ ನೀತಿಗಳು ಇಡೀ ದೇಶದ ಯುವಜನತೆಯನ್ನು ಅಭದ್ರತೆಯತ್ತ ಕೊಂಡೊಯ್ಯುತ್ತಿದೆಯೆಂದು ವೈ. ಸಂಪಂಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಕರ್ನಾಟಕ ಪ್ರಾಂತ ರೈತಸಂಘದ ಕಾರ್ಯದರ್ಶಿ ಸಿ. ಗೋಪಿನಾಥ್ ಮಾತನಾಡುತ್ತಾ ಬಿಜೆಪಿ ಮತ್ತು ಆರ್.ಎಸ್.ಎಸ್ ಜಾತಿ ಧರ್ಮದ ಹೆಸರಿನಲ್ಲಿ ದೇಶವನ್ನು ಹೊಡೆದು ಹಾಳುವ ನೀತಿ ಮತ್ತು ಕೋಮುವಾದತನದಿಂದ ಜನರನ್ನು ಹಾಳುವ ಸಿದ್ಧಾಂತಕ್ಕೆ ಕೈ ಹಾಕಿದೆಯೆಂದು ಆರೋಪಿಸಿದರು.
ಅಧ್ಯಕ್ಷತೆ ವಹಿಸಿದ್ದ ಡಿವೈಎಫ್ಐ ಕಾರ್ಯದರ್ಶಿ ಕೃಷ್ಣಾರೆಡ್ಡಿ ಮಾತನಾಡಿ ಯುವಜನತೆಯನ್ನು ಸಂಘಟಿಸುತ್ತಾ ಶಾಶ್ವತ ನೀರಾವರಿ ಯೋಜನೆಗಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಜನ ಜಾಗೃತ ಜಾಥಾ ನಡೆಸಿ ಜನರನ್ನು ಹೋರಾಟಕ್ಕಿಳಿಸಿದ ಡಿ.ವೈ.ಎಫ್.ಐ ಸಂಘಟನೆ ಮುಂದಿನ ದಿನಗಳಲ್ಲಿ ಜನರ ಬಹುದಿನಗಳ ಕನಸಾದ ಶಾಶ್ವತ ನೀರಾವರಿ ಯೋಜನೆ ಜಾರಿಗಾಗಿ ಹೋರಾಟವನ್ನು ತೀವ್ರಗೊಳಿಸಲಿದೆಯೆಂದು ನುಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಶಿವಪ್ಪ, ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾಧ್ಯಕ್ಷ ಚನ್ನರಾಯಪ್ಪ, ಮುಖಂಡರಾದ ಶ್ರೀನಿವಾಸ್ ಯಾದವ್, ಜಿ.ಎಸ್. ರಾಜು, ಹರೀಶ್, ಆನಂದ, ಅಶ್ವಥ್, ಪ್ರದೀಪ್,ನರಸಿಂಹ, ನದೀಮ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.