ಯೋಜನೆಗಳು ಮಹಿಳೆಯರಿಗೆ ತಲುಪಿಸಿ
ಕೋಲಾರ, ಡಿ.31
ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಮಹಿಳೆಯರಿಗಾಗಿ ಜಾರಿಗೊಳ್ಳುವ ಯೋಜನೆಗಳನ್ನು ಸಕಾಲಕ್ಕೆ ಮತ್ತು ನ್ಯಾಯ ಸಮ್ಮತವಾಗಿ ತಲುಪಿಸಲು ಅಂಗನವಾಡಿ ಕಾರ್ಯಕರ್ತೆಯರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಗೂ ಸಹಾಕಿಯರ ಕ್ಷೇಮಾಭಿವೃದ್ಧಿ ಸಮಿತಿ ಸಂಸ್ಥಾಪಿಕ ಅಧ್ಯಕ್ಷ ಕಲ್ವಮಂಜಲಿ ಸಿ. ಶಿವಣ್ಣ ಸಲಹೆ ನೀಡಿದರು.
ಇಂಧಿರಾ ಗಾಂಧಿ ಮಾತತ್ವ ಸಹಯೋಗ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ ಕೋಲಾರ ತಾಲೂಕಿನ ಕುರಗಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸಂಘದ ಸದಸ್ಯರಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಶಿಬಿರದಲ್ಲಿ ಅವರು ಮಾತನಾಡುತ್ತಿದ್ದರು.
ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಶೋಷಣೆ ಮತ್ತು ವಂಚನೆ ನಡೆಯುತ್ತಿರುವ ಕಾರಣದಿಂದಾಗಿ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿಲ್ಲ, ಸರ್ಕಾರಿದಿಂದ ಬಿಡುಗಡೆಯಾಗುವ ಸೌಲಭ್ಯಗಳನ್ನು ಮಹಿಳೆಯರಿಗೆ ದೊರಕಿಸಿಕೊಡುವಲ್ಲಿ ಯಶಸ್ವಿಯಾಗುವ ಮೂಲಕ ಮಹಿಳೆಯರು ಧೈರ್ಯದಿಂದ ಹಾಗೂ ಸ್ವಾವಲಂಭಿಗಳಾಗಿ ಜೀವನ ಮಾಡುವುದಕ್ಕೆ ಪ್ರೋತ್ಸಾಹ ನೀಡಬೇಕೆಂದರು.
ಮಹಿಳೆಯರಿಗೆ ಯಾವುದೇ ಸಮಸ್ಯೆಗಳು ಎದುರಾದಾಗ ಅಂಗನವಾಡಿ ಕಾರ್ಯರ್ತೆಯರನ್ನು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹಾಗೂ ಆರೋಗ್ಯ ಸಿಬ್ಬಂದಿಯನ್ನು ಸಂಪರ್ಕಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದೆಂದು ತಿಳಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಸ್. ರಮೇಶ್ ಶಿಬಿರದ ಅಧ್ಯಕ್ಷತೆ ವಹಿಸಿದ್ದರು. ಬಾಲ ವಿಕಾಸ ಯೋಜನಾ ಅಧಿಕಾರಿ ಡಾ. ಕಿರಣ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸಂಘಟಣಾ ಕಾರ್ಯದರ್ಶಿ ಕ್ಯಾಲನೂರು ರಾಮಕೃಷ್ಣಪ್ಪ, ಗ್ರಾಮ ಪಂಚಾಯಿತಿ ಸದಸ್ಯೆ ವೆಂಕಟಮ್ಮ, ಚೌಡಮ್ಮ, ಅಂಗನವಾಡಿ ಸಮಿತಿ ಮುಖಂಡರಾದ ನಾಗವೇಣಮ್ಮ, ತರಬೇತಿದಾರ ಚಲಪತಿ ಇದ್ದರು. ಶೈಲಾಜ ಸ್ವಾಗತಿಸಿ, ಮೇಲ್ವಿಚಾರಿಕಿ ಕೆ. ನಂದ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

