ಕೋಲಾರ

ಜಿಲ್ಲಾ ಸಾಹಿತ್ಯ ಸಮ್ಮೇಳನ ಸ್ಥಳ ಪರಿಶೀಲನೆ

Published On :

ಮಾಲೂರು: ಫೆ. 22 ರಿಂದ ಮೂರು ದಿನ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಪಟ್ಟಣದ ಸರ್ಕಾರಿ ಬಾಲಕರ ಕಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಜೆ.ಜಿ. ನಾಗರಾಜ್ ಹೇಳಿದರು.
ಪಟ್ಟಣದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕಾಗಿ ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾ ಕಸಾಪ ಪದಾಧಿಕಾರಿಗಳ ಜೊತೆಯಲ್ಲಿ ಬಂದಿದ್ದ ಜಿಲ್ಲಾಧ್ಯಕ್ಷ ಜೆ.ಜಿ.ನಾಗರಾಜ್ ಮಾತನಾಡಿ, ಇಲ್ಲಿನ ಸರ್ಕಾರಿ ಬಾಲಕರ ಶಾಲೆಯ ಮೈದಾನ ಹಾಗೂ ಬಾಲಕಿಯರ ಕಾಲೇಜು ಅವರಣ ಸಮ್ಮೇಳನ ನಡೆಸಲು ಸೂಕ್ತ ಸ್ಥಳವಾಗಿದ್ದು, ಬಿಇಒ ಹಾಗೂ ಕಾಲೇಜು ಪ್ರಾಂಶುಪಾಲರ ಸಹಕಾರ ನೀಡಲಿದ್ದಾರೆ ಎಂದರು.
ಮುಖ್ಯ ವೇದಿಕೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಹಾಗೂ ಕವಿಗೋಷ್ಠಿ ಹಾಗೂ ಇತರೆ ಚರ್ಚೆ-ಸಭೆಗಳಿಗಾಗಿ ಬಾಲಕಿಯರ ಕಾಲೇಜಿನ ಅವರಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಜಿಲ್ಲಾ ಸಮ್ಮೇಳನಕ್ಕೆ ರಾಜ್ಯದ ಇತರಡೆಯಿಂದ 50ಕ್ಕೂ ಪುಸ್ತಕ ಮಳಿಗೆ ಗಳಿಗೆ ಸ್ಥಳಾವಕಾಶಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಪಟ್ಟಣದಲ್ಲಿ ಫೆ. 22 ರಿಂದ 24 ರವರೆಗೆ ನಡೆಯಲಿರುವ ಜಿಲ್ಲಾ ಸಮ್ಮೇಳನಕ್ಕೆ ತಾಲೂಕಿನ ಎಲ್ಲ ಸಂಘಟನೆಗಳು, ಸಾರ್ವಜನಿಕರು ಸಹಕಾರ ನೀಡಿ ಯಶಸ್ವಿಗೊಳಿಸಬೇಕು ಎಂದರು. ಕಸಾಪ ಜಿಲ್ಲಾ ಸಮಿತಿಯ ಎಂ.ವಿ. ಜರ್ನಾದನ್, ಸಹ್ಯಾದ್ರಿ ಉದಯ್, ಕೋಲಾರ ತಾಲೂಕು ಕಸಾಪ ಅಧ್ಯಕ್ಷ ನಾರಾಯಣಪ್ಪ, ರವಿ, ಜಿಲ್ಲಾ ಗೌರವ ಕಾರ್ಯದರ್ಶಿ ಎ.ಅಶ್ವಥ್ ರೆಡ್ಡಿ, ಕಸಾಪ ತಾಲೂಕು ಅಧ್ಯಕ್ಷ ಮಧು ಸೂಧನ್, ಪರಮೇಶ್, ಕೃಷ್ಣಪ್ಪ, ನಟರಾಜ್, ಚಟುಕು ಸಾಹಿತ್ಯ ಪರಿಷತ್  ಅಧ್ಯಕ್ಷ ಕು.ಚಂದ್ರಪ್ಪ, ಚೈತನ್ಯ ಕಲಾನಿಕೇತನ ಅಧ್ಯಕ್ಷ ಜ.ಮು.ಚಂದ್ರ, ಗುಲ್ಜಾರ್, ವಕೀಲ ಮುನಿವೆಂಕಟಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.