ಕೋಲಾರ

ಸ್ತ್ರೀಶಕ್ತಿ ಸಂಘಕ್ಕೆ ಶಾಸಕರಿಂದ ಚೆಕ್ ವಿತರಣೆ

Published On :

ಮುಳಬಾಗಲು: ಪಟ್ಟಣದ ಶಾಸಕರ ಕಚೇರಿಯಲ್ಲಿ ಭಾನುವಾರ ತಾಲೂಕಿನ 40 ಸ್ತ್ರೀಶಕ್ತಿ ಸಂಘಗಳಿಗೆ ತಲಾ 1.25 ಲಕ್ಷ ಸಹಾಯಧನ ನೀಡಲಾಗುವುದೆಂದು ಶಾಸಕ ಅಮರೇಶ್ ತಿಳಿಸಿದರು.
ತಿಮ್ಮನಾಯಕನಹಳ್ಳಿ ಚೌಡೇಶ್ವರಿ ಸ್ತ್ರೀಶಕ್ತಿ ಸಂಘಕ್ಕೆ ಚೆಕ್ ವಿತರಿಸಿ ಮಾತನಾಡಿದರು. ತಾಲೂಕಿನ ಮಹಿಳೆಯರು ಸ್ವಾಭಿಮಾನದಿಂದ ಜೀವನ ಸಾಗಿಸುವ ಸಲುವಾಗಿ ಸ್ವಾವಲಂಬಿಗಳಾಗಿಸಲು ರಾಜೀವ್ ಗಾಂಧಿ ಸೇವಾ ಟ್ರಸ್ಟ್ ವತಿಯಿಂದ 180 ಮಹಿಳೆಯರಿಗೆ ಉಚಿತ ಬ್ಯೂಟಿಪಾರ್ಲರ್, ಟೈಲರಿಂಗ್ ತರಬೇತಿ ನೀಡಲಾಗುತ್ತಿದೆ ಎಂದರು.
ತಾಲೂಕಿನಲ್ಲಿ ಗುಡಿ ಕೈಗಾರಿಕೆ ಸ್ಥಾಪಿಸಲು 7 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದು, ಮಹಿಳೆಯರ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ತಾಪಂ ಇಒ ಡಾ.ವೆಂಕಟಸ್ವಾಮಿ, ಎನ್. ವೆಂಕಟೇಶಗೌಡ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.