ಜಿಲ್ಲಾ ಬಿಜೆಪಿ ಅಧ್ಯಕ್ಷರ ವಿರುದ್ಧ ಆರೋಪಕ್ಕೆ ಖಂಡನೆ
ಕೋಲಾರ: ಅಧಿಕಾರದ ಆಸೆಯಿಂದ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಹೂವಳ್ಳಿ ಚಲಪತಿ ಇತರರು ಜಿಲ್ಲಾಧ್ಯಕ್ಷ ಎನ್. ಲಕ್ಷ್ಮಯ್ಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆಂದು ಪಕ್ಷದ ನಗರ ಘಟಕದ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ನಗರಸಭೆ ನಾಮನಿರ್ದೇಶಿತ ಸದಸ್ಯ ಎಂ.ರವಿಕುಮಾರ್, ರೈತ ಮೋರ್ಚಾದ ಆನಂದಪ್ಪ, ವಕ್ಕಲೇರಿ ಹೋಬಳಿಯ ಯುವ ಮೋರ್ಚಾ ಅಧ್ಯಕ್ಷ ಮುದುವತ್ತಿ ಮಂಜು ಹಾಗೂ ಗ್ರಾಪಂ ಮಾಜಿ ಸದಸ್ಯ ಸುಬ್ಬರಾಯಪ್ಪ ತಿಳಿಸಿದ್ದಾರೆ.
ಎನ್. ಲಕ್ಷ್ಮಯ್ಯ ಅವರನ್ನು ಜಿಲ್ಲಾಧ್ಯಕ್ಷ ಸ್ಥಾನದಿಂದ ಇಳಿಸಲು ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸುವುದಾಗಿ ತಿಳಿಸಿದ್ದಾರೆ. ಜಿಲ್ಲಾಧ್ಯಕ್ಷರು ಯಾವುದೇ ಕಾರ್ಯಕರ್ತರನ್ನು ಕಡೆಗಣಿಸಿಲ್ಲ. ಕೆಜೆಪಿ ಜತೆ ಗುರುತಿಸಿಕೊಂಡಿರುವವರಿಗೆ ನೀಡಲಾಗಿದ್ದ ಸ್ಥಾನಮಾನ ಹಿಂದಕ್ಕೆ ಪಡೆಯುವಂತೆ ಪಕ್ಷದ ವರಿಷ್ಠರಿಗೆ ತಿಳಿಸಿದ್ದಾರೆ.
ಕೆಡಿಪಿ ಸದಸ್ಯೆ ಸುಕನ್ಯ ಕೆಜೆಪಿ ಸೇರಿರುವುದರಿಂದ ಇವರ ಬದಲಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಮಮತಾ ಅವರಿಗೆ ಆ ಸ್ಥಾನ ಕಲ್ಪಿಸಲು ಪ್ರಯತ್ನಿಸಿದ್ದಾರೆ. ಜಿಪಂ ಸದಸ್ಯೆ ಮುತ್ಯಾಲಮ್ಮ ಹೊಂದಿರುವ ರಾಜ್ಯ ಕುಕ್ಕಟ ಮಹಾ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ್ ಅವರನ್ನು ನೇಮಿಸಲು ವರಿಷ್ಠರಿಗೆ ತಿಳಿಸಿದ್ದಾರೆ.
ಪಕ್ಷದ ನಿಷ್ಠಾವಂತರಿಗೆ ಸೂಕ್ತ ಸ್ಥಾನ- ಮಾನ ಕಲ್ಪಿಸಲು ಜಿಲ್ಲಾಧ್ಯಕ್ಷರು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದರೂ ಅನಗತ್ಯ ಆರೋಪ ಮೂಲಕ ಪಕ್ಷಕ್ಕೆ ಹಾನಿ ಮಾಡುತ್ತಿದ್ದಾರೆ. ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

