ಕೋಲಾರ

ಬಜೆಟ್ನಲ್ಲಿ ಜಿಲ್ಲೆಗೆ ಪ್ರಾಧಾನ್ಯತೆ ನೀಡಲು ಆಗ್ರಹ

Published On :

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಫೆ. 8ರಂದು ಮಂಡಿಸಲಿರುವ ಬಜೆಟ್ನಲ್ಲಿ ಜಿಲ್ಲೆಗೆ ವಿಶೇಷ ಪ್ರಾಧಾನ್ಯತೆ ನೀಡಲು ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಬಿಜೆಪಿ ರೈತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎನ್. ಶ್ರೀನಿವಾಸ್ಗೌಡ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯಾವುದೇ ನದಿ ನಾಲೆಯಿಲ್ಲದೆ ಜಿಲ್ಲೆಯ ರೈತರಿಗೆ ಈ ಬಾರಿಯ ಬಜೆಟ್ ಮಂಡನೆ ವೇಳೆ ಪ್ಯಾಕೇಜ್ ರೂಪದಲ್ಲಿ ವಿಶೇಷ ಅನುದಾನ ನೀಡುವಂತೆ ಹಾಗೂ ರೇಷ್ಮೆ ಬೆಳೆಗಾರರಿಗೆ ನೀಡಲಾಗುತ್ತಿರುವ ಕೆಜಿ ಗೂಡಿಗೆ ನೀಡಲಾಗುತ್ತಿರುವ 10 ಬೆಂಬಲ ಬೆಲೆಯನ್ನು 25 ಗಳಿಗೆ ಏರಿಸುವಂತೆ ಹಾಗೂ ಹಾಲಿಗೆ ನೀಡುತ್ತಿರುವ 2 ಬೆಂಬಲ ಬೆಲೆಯನ್ನು 5ಕ್ಕೆ ಏರಿಸುವಂತೆ ಮನವಿ ಸಲ್ಲಿಸಲಾಗುವುದು ಎಂದರು.
ಬರಡು ಜಿಲ್ಲೆಯ ಈ ಭಾಗದಲ್ಲಿ ಸಾವಿರ ಅಡಿ ಕೊಳವೆ ಬಾವಿ ಕೊರೆದರೂ ನೀರು ಸಿಗುತ್ತಿಲ್ಲ. ಆಲ್ಪ- ಸ್ವಲ್ಪ ದೊರೆತಿರುವ ನೀರನ್ನು ಮೇಲೆತ್ತಲು ದಿನಕ್ಕೆ ಕನಿಷ್ಠ 10 ರಿಂದ 12 ಗಂಟೆ 3 ಫೇಸ್ ವಿದ್ಯುತ್ ಬೇಕಾಗುತ್ತದೆ. ಜಿಲ್ಲೆಯ ಅತಿ ಹೆಚ್ಚು ರೈತರು ದ್ರಾಕ್ಷಿ ಬೆಳೆಯುತ್ತಿದ್ದಾರೆ. ದ್ರಾಕ್ಷಿ ಮಾರಾಟಕ್ಕೆ ಮಾರುಕಟ್ಟೆ ವ್ಯವಸ್ಥೆ ಇಲ್ಲದಿರುವುದರಿಂದ ರೈತರಿಗೆ ಬಹಳ ತೊಂದರೆಯಾಗುತ್ತಿದೆ. ಆದ್ದರಿಂದ ಈ ಭಾಗದಲ್ಲಿ ಮಾರುಕಟ್ಟೆ ಸ್ಥಾಪನೆಗೆ ಬಜೆಟ್ ಮಂಡನೆಯಲ್ಲಿ ಘೋಷಣೆ ಮಾಡಬೇಕೆಂದರು.
ರೈತ ಮೋರ್ಚಾದ ಜಿಲ್ಲಾ ಉಸ್ತುವಾರಿ ಸದಸ್ಯ ಅಗಲಗುರ್ಕಿ ಚಂದ್ರಶೇಖರ್ ಮಾತನಾಡಿ, ರಾಜ್ಯದ ರೈತರ ಹಿತದೃಷ್ಟಿಯಿಂದ ಸರ್ಕಾರ ಹಲವಾರು ಯೋಜನೆ ಅನುಷ್ಠಾನಗೊಳಿಸಿದೆ. ಯೋಜನೆಯನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ರೈತರಲ್ಲಿ ಮನವಿ ಮಾಡಿದ ಅವರು, ಜಿಲ್ಲೆಯಲ್ಲಿ ಆಲೂಗಡ್ಡೆ ಬೆಳೆಯುವ ರೈತರ 1 ಎಕರೆ ಜಮೀನಿಗೆ 5 ಸಾವಿರ ಸಹಾಯಧನ ಸರ್ಕಾರದಿಂದ ನೀಡಲಾಗುತ್ತಿದೆ. ಪಾಲಿ ಹೌಸ್ ಮೂಲಕ ಬೆಳೆಯುವ ಬೆಳೆಗೆ ಯಾವುದೇ ಕೀಟ, ರೋಗ ಬಾಧೆ ತೊಂದರೆ ಇರುವುದಿಲ್ಲ ಎಂದರು.
ಮುಖಂಡ ಎ.ವಿ. ಭೈರೆಗೌಡ ಮಾತನಾಡಿ, ಸರ್ಕಾರದಿಂದ ಜಿಲ್ಲೆಯಲ್ಲಿ ವೈನ್ ಪಾರ್ಕ್ ಸ್ಥಾಪನೆ ಮಾಡಬೇಕು. ಈ ಭಾಗದಲ್ಲಿ ಬೆಳೆಯಲಾಗುತ್ತಿರುವ ಹೊಸ ತಳಿಗಳ ರೋಜ ಹೂ, ರೂಬಿಸ್ಟಾರ್, ಪೈವ್ಸ್ಟಾರ್, ಪಿಂಕ್ರೋಜ ಹೂವುಗಳನ್ನು ಹೊರ ದೇಶಕ್ಕೆ ರಫ್ತು ಮಾಡಲು ಸರ್ಕಾರದಿಂದ ಸಬ್ಸಿಡಿ ನೀಡುವಂತೆ ಮನವಿ ಮಾಡಲಾಗುವುದು ಎಂದರು.
ಚಿಕ್ಕನಹಳ್ಳಿ ನಾರಾಯಣಸ್ವಾಮಿ, ಮುಖಂಡರಾದ ಅಗಲಗುರ್ಕಿ ಚಂದ್ರಶೇಖರ್ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.