ಕೋಲಾರ

ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್

Published On :




ಮಾಲೂರು: ಶೈಕ್ಷಣಿಕ ಅಭಿವೃದ್ಧಿಗಾಗಿ ಉನ್ನತ ಶಿಕ್ಷಣ ಪಡೆಯುತ್ತಿರುವ ಪ್ರತಿ ವಿದ್ಯಾರ್ಥಿಗೂ ಟ್ಯಾಬ್ಲೆಟ್ ನೀಡುವುದಾಗಿ ಶಾಸಕ ಕೃಷ್ಣಯ್ಯ ಶೆಟ್ಟಿ ಘೋಷಿಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಮ್ಮದೆ ನಾರಾಯಣ ಶೆಟ್ಟಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಪಟ್ಟಣದ ವಿದ್ಯಾರ್ಥಿಗಳಿಗೆ ಸೋಮವಾರ ಆಯೋಜಿಸಿದ್ದ ಸಾಮೂಹಿಕ ಸರಸ್ವತಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತ ಇಂದಿನ ವೇಗದ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿ ಬೇಕಾಗಿದೆ. ಗ್ರಾಮೀಣ ಪ್ರದೇಶವಾದ ಮಾಲೂರು ತಾಲೂಕಿನಲ್ಲಿ ಕಂಪ್ಯೂಟರ್ ಶಿಕ್ಷಣ ಪಡೆದಿದ್ದರೂ ಬಡತನ ಹಿನ್ನೆಲೆಯಲ್ಲಿ ಶಿಕ್ಷಣಕ್ಕೆ ಅವಶ್ಯವಿರುವುದನ್ನು ಕೊಳ್ಳಲಾಗುತ್ತಿಲ್ಲ. ಇದರಿಂದ ಪ್ರತಿಭೆವುಳ್ಳ ವಿದ್ಯಾರ್ಥಿಗೆ ಅನ್ಯಾಯವಾಗುತ್ತಿದೆ. ಈ ನಿಟ್ಟಿನಲ್ಲಿ ಮೆಡಿಕಲ್,ಇಂಜಿನಿಯರಿಂಗ್ ಸೇರಿದಂತೆ ಇತರೆ ಉನ್ನತ ಶಿಕ್ಷಣ ಪಡೆಯುತ್ತಿರುವ ಪ್ರತಿ ವಿದ್ಯಾರ್ಥಿಗೂ ಮಿನಿ ಲ್ಯಾಪ್ ಟಾಪ್ ನೀಡಲು ಉದ್ದೇಶಿಸಲಾಗಿದೆ ಎಂದರು.
ಇದಲ್ಲದೆ ಹತ್ತನೇ ತರಗತಿಯಲ್ಲಿ ಶೇ.90 ಅಂಕ ಪಡೆದ ವಿದ್ಯಾರ್ಥಿಗೆ ತಲಾ 5 ಸಾವಿರ ರು. ಪ್ರೋತ್ಸಾಹ ಧನ, ಶೇ.60 ಕ್ಕೂ ಹೆಚ್ಚು ಫಲಿತಾಂಶ ನೀಡುವ ಶಾಲೆಯ ಶಿಕ್ಷಕರಿಗೆ ತಲಾ 50 ಸಾವಿರ ರು. ನೀಡಲಾಗುವುದು ಎಂದ ಶಾಸಕರು ಶೇ.75 ಫಲಿತಾಂಶ ಪಡೆಯುವ ಶಾಲೆಯ ಶಿಕ್ಷಕರಿಗೆ ತಲಾ 75 ಸಾವಿರ ರು. ಹಾಗೂ ಶೇ.90 ಫಲಿತಾಂಶ ಪಡೆಯುವ ಶಾಲೆಯ ಶಿಕ್ಷಕರಿಗೆ ತಲಾ ಒಂದು ಲಕ್ಷ ರು. ನೀಡುವುದಾಗಿ ಘೋಷಿಸಿದರು.
ಇದೇ ಸಂದರ್ಭದಲ್ಲಿ ಪಟ್ಟಣದ ಪ್ರತಿ ಶಾಲೆಯ ಪ್ರತಿನಿಧಿಯೂಂದಿಗೆ ಸರಸ್ವತಿ ಪೂಜೆ ನಡೆಸಿದ ಶಾಸಕರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ವಿವಿಧ ಶಾಲೆಯ ಸುಮಾರು 8 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆಗಳನ್ನು ವಿತರಿಸಿದರು. ಟ್ರಸ್ಟ್ ಕಾರ್ಯದರ್ಶಿಎಸ್.ಎನ್.ರಮೇಶ್, ಪುರಸಭೆ ಅಧ್ಯಕ್ಷೆ ಅಮುದಾ ವೇಣು, ಉಪಾಧ್ಯಕ್ಷ ಸಿ.ಪಿ.ನಾಗರಾಜ್,ತಾ.ಪಂ. ಅಧ್ಯಕ್ಷ ಚಂದ್ರಣ್ಣ, ಉಪಾಧ್ಯಕ್ಷೆ ನಾಗವೇಣಿ, ಸ್ಥಾಯಿ ಸಮಿತಿ ಅಧ್ಯಕ್ಷ ಲೋಕೇಶ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ನಾಗರಾಜ್, ಜಿ.ಪಂ.ಸದಸ್ಯರಾದ ರಾಮಸ್ವಾಮಿ ರೆಡ್ಡಿ, ಯಲ್ಲಮ್ಮ ಸಂಪಂಗಿ, ಬಿಜೆಪಿ ತಾಲೂಕು ಅಧ್ಯಕ್ಷ ನಾರಾಯಣಗೌಡ, ಎ.ಪಿ.ಎಂ.ಸಿ.ಅಧ್ಯಕ್ಷ ಕೆ.ಆರ್.ಬೀರಪ್ಪ, ತಾ.ಪಂ.ಸದಸ್ಯರಾದ ಗೋಪಾಲ್ ಗೌಡ,ಆನಂದ್, ಪುಟ್ಟಸ್ವಾಮಿ, ಅಮರಾವತಿ, ಮುನಿಕೃಷ್ಣ,ಪುರಸಭೆ ಸದಸ್ಯರಾದ ಭಾರತಮ್ಮ ನಂಜುಂಡಪ್ಪ, ಆಂಜಿನಪ್ಪ, ಸುನಂದಮ್ಮ, ಮಧುಸೂಧನ್, ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೃಷ್ಣಾ ರೆಡ್ಡಿ, ಮುಖಂಡರಾದ ಅಶ್ವಥ್ ರೆಡ್‌ಡಿ,ಬಿ.ಕೆ.ನಾರಾಯಣಸ್ವಾಮಿ,ನೂಟವೇ ವೆಂಕಟೇಶ್ ಗೌಡ,ಬಿ.ಕೆ.ರವಿಶಂಕರ್, ರಾಜಪ್ಪ,ಪಿ.ಎಂ.ವೆಂಕಟೇಶ್, ಮುನಿರಾಜು, ಧರ್ಮರಾಜ್,ಬಿಜೆಪಿ ನಾರಾಯಣಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.