ಸರ್ಕಾರಿ ನೌಕರರಿಗೂ ಸಮಸ್ಯೆಗಳಿವೆ: ಅನಿಲ್ಕುಮಾರ್
ಮುಳಬಾಗಲು: ಸರ್ಕಾರಿ ನೌಕರರ ಸಮಸ್ಯೆಗಳನ್ನು ಅರಿತು ಅವರಿಗೆ ನ್ಯಾಯ ಒದಗಿಸುವಂತೆ ಶಾಲಾ ಪ್ರಾಥಮಿಕ ಶಿಕ್ಷಕರ ಒಕ್ಕೂಟದ ಜಿಲ್ಲಾಧ್ಯಕ್ಷ ಅನಿಲ್ಕುಮಾರ್ ಸಂಘದ ನೂತನ ರಾಜ್ಯ ಕಾರ್ಯದರ್ಶಿ ದೂಲಪಲ್ಲಿ ಅಶೋಕ್ ಅವರನ್ನು ಆಗ್ರಹಿಸಿದರು.
ಆಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಸಂವಿಧಾನ ಮತ್ತು ಆಡಳಿತ ನಿಯಮದಂತೆ ನೂತನವಾಗಿ ಆಯ್ಕೆಯಾದ ರಾಜ್ಯ ಸಂಘಟನಾ ಕಾರ್ಯದರ್ಶಿ ದೂಲಪಲ್ಲಿ ಅಶೋಕ್ ಅವರಿಗೆ ಪಟ್ಟಣದ ಶಿಕ್ಷಕರ ಸಮುದಾಯ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಸಮಾಜದ ಒಳಿತಿಗಾಗಿ ಸರ್ಕಾರಿ ನೌಕರರು ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದರೂ, ಮೇಲಾಧಿಕಾರಿಗಳಿಂದ ಆಗಾಗ ಲೋಪದೋಷಗಳಾಗಿ ನೌಕರರು ಶೋಷಣೆಗೊಳಗಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಎಚ್.ವೆಂಕಟಗಿರಿಯಪ್ಪ, ತಾಲೂಕು ಒಕ್ಕೂಟದ ಸೊಣ್ಣಪ್ಪ, ವೆಂಕಟರವಣಪ್ಪ, ಸೋಮೇಶ್, ವೇಣುಗೋಪಾಲ್, ಸುರೇಶ್, ಶ್ರೀನಿವಾಸಪುರ ಘಟಕದ ಅಧ್ಯಕ್ಷ ರವಿಕುಮಾರ್, ಎಂ.ಎಸ್.ಮಂಜುನಾಥ್, ವೆಂಕಟೇಶಗೌಡ, ಚಲಪತಿ, ಸುಬ್ರಮಣಿ, ರಾಮಕೃಷ್ಣಪ್ಪ. ಮುಂತಾದವರು ಭಾಗವಹಿಸಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

