ಕೆಜಿಎಫ್ ಜೆಡಿಎಸ್ ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆ
ಕೆಜಿಎಫ್: ಕ್ಷೇತ್ರದ ನಗರ, ಗ್ರಾಮೀಣ ಪ್ರದೇಶದ ಜಾತ್ಯತೀತ ಜನತಾದಳ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ಜಿಲ್ಲಾ ಕಾರ್ಯಾಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಅವರ ನೇತೃತ್ವದಲ್ಲಿ ನಗರದ ಆರ್.ಆರ್. ವಸತಿ ಗೃಹದಲ್ಲಿ ನಡೆಸಲಾಯಿತು.
ಸಭೆಯಲ್ಲಿ ಪಕ್ಷದ ಅಭಿವೃದ್ಧಿ ಮತ್ತು ಇತರೆ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಕೆಜಿಎಫ್ ಕ್ಷೇತ್ರದ ಜೆಡಿಎಸ್ನ ಸಂಭವನೀಯ ಅಭ್ಯರ್ಥಿ ಎಂ.ಭಕ್ತವತ್ಸಲಂ ಸಭೆಯ ಮುಂದಾಳತ್ವ ವಹಿಸಿದ್ದರು.
ಕೆಜಿಎಫ್ ಘಟಕದ ಜೆಡಿಎಸ್ ಅಧ್ಯಕ್ಷ ಎ.ಗೋಪಾಲ್, ಉಪಾಧ್ಯಕ್ಷ ವಿ.ಸಿ.ಗಣೇಶ್, ನೂರುಲ್ಲಾ ಖಾನ್, ಕಾರ್ಯಾಧ್ಯಕ್ಷ ಪಿ.ಪರಂದಾಮನ್, ಪ್ರಧಾನ ಕಾರ್ಯದರ್ಶಿ ಪಿ.ದಯಾನಂದ್, ಜಂಟಿ ಕಾರ್ಯದರ್ಶಿ ರವಿ, ಸಹಾಯಕ ಕಾರ್ಯದರ್ಶಿ ಪೂಂಡಿರಾಜ್, ಖಜಾಂಚಿ ಸಿ.ಎಸ್.ಚಿನ್ನಪ್ಪ, ಸಲಹಗಾರರಾಗಿ ಹೆಚ್.ವೆಂಕಟಯ್ಯ, ಆನಂದ್ರಾಜ್ ಅವರುಗಳನ್ನು ಆಯ್ಕೆ ಮಾಡಲಾಗಿದೆ.
ಅದೇ ರೀತಿ ಬೇತಮಂಗಲ ಹೋಬಳಿ ಘಟಕದ ಗೌರವ ಅಧ್ಯಕ್ಷ ಲಕ್ಷ್ಮೀನಾರಾಯಣ, ಅಧ್ಯಕ್ಷ ಎಂ.ರಮೇಶ್ ಬಾಬು, ಉಪಾಧ್ಯಕ್ಷ ಜಯರಾಮ, ಮುನಿವೆಂಕಟಪ್ಪ, ಕಾರ್ಯಾಧ್ಯಕ್ಷ ರಾಮಚಂದ್ರಪ್ಪ, ಕಾರ್ಯದರ್ಶಿ ಕೃಷ್ಣಪ್ಪ, ಜಂಟಿ ಕಾರ್ಯದರ್ಶಿ ಲೀಲಾವತಿ, ವ್ಯವಸ್ಥಾಪಕ ಎನ್.ಕೆ.ಪ್ರಕಾಶ್ ಅವರುಗಳನ್ನು ಆಯ್ಕೆ ಮಾಡಲಾಗಿದೆ.
ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ದರಾಗಿ ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಮುಬಾರಕ್, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಕೆ.ರಾಜೇಂದ್ರನ್, ಜಿಲ್ಲಾ ಸಹಕಾರಿ ಯೂನಿಯನ್ ಮಾಜಿ ಅಧ್ಯಕ್ಷ ರುದ್ರಸ್ವಾಮಿ, ಮಾಜಿ ಶಾಸಕ ಎಂ.ಭಕ್ತವತ್ಸಲಂ, ಮಾಜಿ ನಗರಸಭಾ ಅಧ್ಯಕ್ಷ ಅತ್ತಾವುಲ್ಲಾ ಸೇರಿದಂತೆ ಇತರೆ ಕಾರ್ಯಕರ್ತರು, ಪದಾಧಿಕಾರಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

