ಕೋಲಾರ

'ಗ್ರಾಮೀಣರು ಒಗ್ಗಟ್ಟಿನಿಂದ ಅಭಿವೃದ್ಧಿಗೆ ಶ್ರಮಿಸಲಿ'

Published On :

ಕೋಲಾರ:  ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಯುವಕರು ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚೌಡೇಶ್ವರಿ ಕರೆ ನೀಡಿದರು.
ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿನ ಗಾಣಿಗ ಮತ್ತು ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟಿದ್ದ ಸರ್ಕಾರ ಸ್ಮಶಾನವನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿದ ಅವರು, ಗ್ರಾಮಗಳ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಪ್ರಮುಖವಾಗಿರುತ್ತದೆ. ಅಭಿವೃದ್ಧಿ ಕೆಲಸಕ್ಕೆ ಸರ್ಕಾರಗಳಿಂದ ಕೋಟ್ಯಂತರ ರುಪಾಯಿ ಅನುದಾನ ಬಿಡುಗಡೆಯಾಗುತ್ತಿದೆ. ಯುವಜನತೆ ಯಾವುದೇ ದ್ವೇಷ ಇಟ್ಟುಕೊಳ್ಳದೆ ಅನ್ಯೂನವಾಗಿ ಬಾಳುವಂತಾಗಬೇಕೆಂದರು.
ಅಭಿವೃದ್ಧಿ ವಿಚಾರದಲ್ಲಿ ಸಣ್ಣಪುಟ್ಟ ಮನಸ್ತಾಪ ಮಾಡಿಕೊಂಡು ವೈಷಮ್ಯಗಳನ್ನು ಬೆಳೆಸಿಕೊಂಡರೆ ಅದು ಯಾರಿಗೂ ಲಾಭವಾಗುವುದಿಲ್ಲ. ಇದನ್ನೇ ಕೆಲವರು ಬಂಡವಾಳ ಮಾಡಿಕೊಂಡು ಓಟಿನ ರಾಜಕಾರಣ ಮಾಡೋದಿಕ್ಕೆ ಅಂತಾನೇ ಕಾಯುತ್ತಿರುತ್ತಾರೆ. ಇದಕ್ಕೆಲ್ಲಾ ಅವಕಾಶ ನೀಡದೆ ನಾವೆಲ್ಲಾ ಒಂದೇ ಎಂಬ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ಗ್ರಾಮದ ಅಪ್ಪಯ್ಯಣ್ಣ, ರಾಮಾಂಜನೇಯ (ನಾಯಕ), ವೇಣುಗೋಪಾಲ್, ಶ್ರೀನಿವಾಸ್, ವೆಂಟಕರಮಣಪ್ಪ, ತಿಗಳ ಜನಾಂಗದ ಮುನಿರಾಜು, ಎನ್.ಮಾರ್ಕಂಡಪ್ಪ, ಮುನಿರಾಜು, ಶ್ರೀನಿವಾಸಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.