ಕೋಲಾರ

ಕೊಳಗೇರಿ ವಾಸಿಗಳಿಗೆ ಹಕ್ಕುಪತ್ರ: ಭರವಸೆ

Published On :

ಕೋಲಾರ:  ನಗರದ ಶ್ರೀನಿವಾಸಪುರ ವೃತ್ತದ ವೀರಾಂಜನೇಯ ನಗರದ ಕೊಳಗೇರಿ ವಾಸಿಗಳಿಗೆ ಮನೆಗಳ ಹಕ್ಕುಪತ್ರ ವಿತರಿಸಲು ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಆರ್. ವರ್ತೂರು ಪ್ರಕಾಶ್ ಪ್ರಕಟಿಸಿದರು.
ನಗರದ ಗಂಗಮ್ಮನಪಾಳ್ಯದಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಹಾಗೂ ಟಿಪ್ಪು ನಗರ ಮತ್ತು ವೀರಾಂಜನೇಯ ನಗರಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ನಗರದಲ್ಲಿ ಹಲವಾರು ವರ್ಷಗಳಿಂದ ಈ ಭಾಗದಲ್ಲಿ ವಾಸವಿರುವ ಜನತೆಗೆ ಹಕ್ಕುಪತ್ರ ವಿತರಿಸುವ ಹಾಗೂ ಇಲ್ಲಿ ಮೂಲ ಸೌಲಭ್ಯಗಳಿಗೆ ಆದ್ಯತೆ ನೀಡುವ ಕೆಲಸವನ್ನು ಶೀಘ್ರವೇ ಮಾಡುವುದಾಗಿ ಹೇಳಿದರು. ಇಲ್ಲಿನ ಜನತೆಯ ಓಟನ್ನು ಮಾತ್ರ ಪಡೆಯುವ ರಾಜಕಾರಣಿ ನಾನಲ್ಲ ಎಂಬುದನ್ನು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಈಗಾಗಲೇ ಕ್ಷೇತ್ರದಲ್ಲಿ ಸಾಬೀತು ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಇಲ್ಲಿನ ಸಮಸ್ಯೆಯನ್ನು ಪರಿಹರಿಸುವತ್ತ ಗಮನಹರಿಸುವುದಾಗಿ ಹೇಳಿದರು. ಸ್ಥಾಯಿ ಸಮಿತಿ ಅಧ್ಯಕ್ಷ ಸೋಮಶೇಖರ್, ಮಾಜಿ ಅಧ್ಯಕ್ಷ ರೌತ್ ಶಂಕರಪ್ಪ, ಚಂದ್ರಶೇಖರ್, ಶ್ರೀನಿವಾಸ್, ಲೋಕೇಶ್, ವೆಂಕಟೇಶ್, ಮಂಜುನಾಥ್, ಶಿವ, ಎಂ.ಎನ್.ಮಂಜುನಾಥ್, ಮಂಜು ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.