ಕೋಲಾರ

ವಿದ್ಯುತ್ ತಂತಿ ತಗುಲಿ ಲೈನ್‌ಮ್ಯಾನ್ ಸಾವು

Published On :

ಮುಳಬಾಗಲು:  ತಾಲೂಕಿನ ಬಲ್ಲಶೆಟ್ಟಿಹಳ್ಳಿ ಗ್ರಾಮದಲ್ಲಿ ಕೆಟ್ಟು ಹೋಗಿದ್ದ ವಿದ್ಯುತ್ ಟ್ರಾನ್ಸ್‌ಫಾರ್ಮರ್ಸ್ ದುರಸ್ತಿ ಮಾಡುತ್ತಿದ್ದ ವೇಳೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಲೈನ್‌ಮ್ಯಾನ್‌ವೊಬ್ಬರು ಶನಿವಾರ ಸಂಜೆ ಸಾವಿಗೀಡಾಗಿದ್ದಾರೆ. ತಾಲೂಕಿನ ತೊರಡಿಯ ರಮೇಶ್ (30) ಮೃತಪಟ್ಟವರು. ಸುದ್ದಿ ತಿಳಿದು ತೊರಡಿ ಗ್ರಾಮಸ್ಧರು ಹಾಗೂ ಬೆಸ್ಕಾಂ ನೌಕರರು ಪಟ್ಟಣದ ಬೆಸ್ಕಾಂ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ಇಲಾಖೆಯಿಂದ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಒತ್ತಾಯಿಸಿದರು. ಪ್ರತಿಭಟನೆಯಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ಧಳಕ್ಕೆ ಆಗಮಿಸಿದ ಬೆಸ್ಕಾಂ ಅಧಿಕಾರಿಗಳು ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ಸು ಪಡೆಯಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.