ವೆಂಕಟಮುನಿಯಪ್ಪ ಜೆಡಿಎಸ್ ಸೇರ್ಪಡೆ
ಕೋಲಾರ: ಬಂಗಾರಪೇಟೆ ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ ಅವರು ಶುಕ್ರವಾರ ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಸೇರ್ಪಡೆಯಾದರು.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಶಾಸಕರು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿ ತಮ್ಮ ನಿಷ್ಟೆ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಕುಮಾರಸ್ವಾಮಿ, ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುತ್ತೇವೆ. ಆದರೆ ಟಿಕೆಟಿಗಾಗಿ ಒತ್ತಡ ಹೇರಬಾರದು, ಬಂಗಾರಪೇಟೆ ಕ್ಷೇತ್ರದಿಂದ ಸ್ಪರ್ಧಿಸಲು ಜಿಪಂ ಮಾಜಿ ಸದಸ್ಯ ರಾಮಚಂದ್ರ ಈಗಾಗಲೇ ಅಕಾಂಕ್ಷಿಯಾಗಿದ್ದಾರೆ. ಚುನಾವಣೆಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈಗ ಮಾಜಿ ಶಾಸಕ ವೆಂಕಟಮುನಿಯಪ್ಪ ಪಕ್ಷಕ್ಕೆ ಬಂದಿರುವುದರಿಂದ ಇಬ್ಬರೂ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಯಾರಾದರೂ ಒಬ್ಬರು ತ್ಯಾಗ ಮಾಡಲು ಸಿದ್ಧರಿರಬೇಕೆಂದರು.
ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನ್ನು ಜನರು ತಿರಸ್ಕರಿಸಿದ್ದು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಎಲ್ಲ 224 ಕ್ಷೇತ್ರಗಳಲ್ಲೂ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದರು. ಕೋಲಾರ ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದಲೂ ಜೆಡಿಎಸ್ ಪ್ರಬಲವಾಗಿದ್ದು, ಕಳೆದ ಚುನಾವಣೆಯ ಸಮಯದಲ್ಲಿ ಸಮರ್ಥ ನಾಯಕತ್ವದ ಕೊರತೆಯಿಂದ ಸ್ವಲ್ಪಮಟ್ಟಿನ ಹಿನ್ನಡೆಯಾಗಿದೆ. ಈ ಬಾರಿ ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ ಮತ್ತು ನೂರಾರು ಬೆಂಬಲಿಗರ ಸೇರ್ಪಡೆಯೊಂದಿಗೆ ಪಕ್ಷಕ್ಕೆ ಆನೆಬಲ ಬಂದಂತಾಗಿದೆ ಎಂದರು.
ರಾಜ್ಯ ಬೀಜ ನಿಗಮದ ನಿರ್ದೇಶಕ ವಡಗೂರ್ ನಾಗರಾಜ್, ತಾಪಂ ಉಪಾಧ್ಯಕ್ಷ ಎಂ.ಸಂಪಂಗಿರೆಡ್ಡಿ, ಮಾಜಿ ಅಧ್ಯಕ್ಷೆ ಲಕ್ಷ್ಮಿ ಬಿ.ಚಕ್ರವರ್ತಿ, ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಎಸ್.ಕೃಷ್ಣೇಗೌಡ, ಪ್ರಧಾನ ಕಾರ್ಯದರ್ಶಿ ಪಾರ್ಥಸಾರಥಿ, ಮುಖಂಡರಾದ ಡಿ.ವಿ.ರಘುರಾಮ್, ರಮಣಾನಾಯ್ಡು ಹಾಗೂ ಕೆಲವು ತಾಪಂ, ಗ್ರಾಪಂ ಸದಸ್ಯರು ಈ ಸಂದರ್ಭದಲ್ಲಿ ಪಕ್ಷ ಸೇರ್ಪಡೆಯಾದರು.
ಮಾಜಿ ಸಚಿವ ಬಸವರಾಜ ಹೊರಟ್ಟಿ, ಸುಭಾಷ್ ಭರಣಿ, ಚೌಡರೆಡ್ಡಿ, ಕುರುಬೂರು ಕೆ.ಸಿ.ಶಂಕರೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

