ಸರ್ಕಾರಿ ಆಸ್ಪತ್ರೆ ಬಾಗಿಲು ಪುಡಿ ಪುಡಿ
ಬಾಗೇಪಲ್ಲಿ: ಸರ್ಕಾರಿ ವೈದ್ಯರು ಮತ್ತು ಸಿಬ್ಬಂದಿ ತಮ್ಮ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ದೊರೆಯದ ಕಾರಣ, ಸಾರ್ವಜನಿಕರು ಸೋಮವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಬಾಗಿಲ ಗ್ಲಾಸ್ ಪುಡಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರೆಯದೆ ಸಾರ್ವಜನಿಕರು ಪರದಾಡುತ್ತಿದ್ದಾರೆ. ಬಡ ರೋಗಿಗಳು ಅತ್ತ ಖಾಸಗಿ ಆಸ್ಪತ್ರೆಗಳಿಗೆ ಹೋಗಲಾಗದೆ, ಇತ್ತ ಚಿಕಿತ್ಸೆ ಸಿಗದ ಸರ್ಕಾರಿ ಆಸ್ಪತ್ರೆಯಲ್ಲಿ ಇರಲು ಆಗದೆ ಸಮಸ್ಯೆಗಳಿಗೆ ಸಿಲುಕಿಕೊಳ್ಳುತ್ತಿದ್ದಾರೆ. ಎರಡು ದಿನ ಶಾಂತಿಯಿಂದಲೇ ಇದ್ದ ಜನರು ಸೋಮವಾರ ತಮ್ಮ ಸಹನೆ ಕಳೆದುಕೊಂಡರು. ಆಸ್ಪತ್ರೆಗೆ ಬೀಗ ಹಾಕಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯ ಗಾಜಿನ ಬಾಗಿಲಿಗೆ ಕಲ್ಲುಗಳನ್ನು ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ 4 ದಿನಗಳಿಂದಲ್ಲೂ ಸರ್ಕಾರಿ ಆಸ್ಪತ್ರೆಗೆ ಬೀಗ ಹಾಕಿ ವೈದ್ಯರು ಮತ್ತು ನೌಕರರು ಮುಷ್ಕರದಲ್ಲಿ ನಿರತರಾಗಿರುವುದರಿಂದ ಚಿಕ್ಸಿತೆಗಾಗಿಬಂದ ರೋಗಿಗಳಿಗೆ ಚಿಕ್ಸಿತೆ ಸಿಗುತ್ತಿಲ್ಲ. ಇಲ್ಲಿನ ಬಡ ರೋಗಿಗಳ ನರಳಾಟವನ್ನು ಕೇಳುವವರೇ ಇಲ್ಲದಂತಾಗಿದೆ. ತಾಲ್ಲೂಕಿನ ಬಡ ರೋಗಿಗಳ ಆರೋಗ್ಯದ ವಿಚಾರದಲ್ಲಿ ಸರ್ಕಾರ ಮತ್ತು ಜಿಲ್ಲಾಡಳಿತ ಪರ್ಯಾಯ ವ್ಯವಸ್ಥೆ ಕಲ್ಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದರು.
ವೈದ್ಯರ ಮತ್ತು ಸರ್ಕಾರದ ನಡುವಿನ ಜಗಳದಲ್ಲಿ ಬಡರೋಗಿಗಳ ಪ್ರಾಣ ಬಲಿಯಾಗುತ್ತಿದೆ. ಅದೇ ರೀತಿಯಲ್ಲಿ ಅಪಘಾತಕ್ಕೊಳಗಾದ ಗಾಯಾಳುಗಳು, ಗರ್ಭಿಣಿಯರು, ಬಾಣಂತಿಯರು, ವೃದ್ಧರು ಸೇರಿದಂತೆ ಅನೇಕ ರೋಗಿಗಳು ದೂರ ದೂರದ ಗ್ರಾಮಗಳಿಂದ ಬಂದು ಆಸ್ಪತ್ರೆಯ ಮುಂಭಾಗದಲ್ಲಿ ವೈದ್ಯರ ಬರುವಿಕೆಗಾಗಿ ಗಂಟೆಗಟ್ಟಲೇ ಕಾದು ಕುಳಿತುಕೊಂಡಿರಬೇಕಾಗಿದೆ ಎಂದು ಹಿಡಿ ಶಾಪ ಹಾಕಿದರು.
ನರಳಾಟ ತಪ್ಪಿಸಿ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಆಸ್ಪತ್ರೆಗೆ ಬೀಗ ಜಡಿದು ಧರಣಿ ನಡೆಸುತ್ತಿರುವ ಹಿನ್ನಲೆಯಲ್ಲಿ ರೋಗಿಗಳು
ಖಾಸಗೀ ಕ್ಲಿನಿಕ್ಗಳ ಮೊರೆ ಹೋಗುತ್ತಿದ್ದು, ಖಾಸಗಿ ಕ್ಲಿನಿಕ್ಗಳಿಗೆ ಒತ್ತಡ ಮತ್ತು ರೋಗಿಗಳಿಗೆ ತೊಂದರೆಯಾಗುತ್ತಿದೆ. ಸರ್ಕಾರ ತಕ್ಷಣ ವೈದ್ಯರ ಸಮಸ್ಯೆಗಳನ್ನು ಬಗೆಹರಿಸಿ, ಬಡರೋಗಿಗಳು ನರಳಾಡುವುದನ್ನು ತಪ್ಪಿಸಬೇಕೆಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

