ಕೋಲಾರ

ಆರೋಗ್ಯ ವಲಯಕ್ಕೆ ಆದ್ಯತೆ: ಶಾಸಕ ಕೃಷ್ಣಯ್ಯಶೆಟ್ಟಿ

Published On :

ಮಾಲೂರು: ಬಡ ಜನತೆ ಹೆಚ್ಚಿರುವ ಈ ತೂರ್ನಹಳ್ಳಿ ಭಾಗದಲ್ಲಿ ಒಂದು ಕೋಟಿ ರು.ವೆಚ್ಚದಲ್ಲಿ ಸರ್ಕಾರಿ ಆರೋಗ್ಯ ಕೇಂದ್ರ ನಿರ್ಮಿಸಲು ರಾಜ್ಯ ಸರ್ಕಾರದಿಂದ ಮಂಜೂರಾತಿ ದೂರತಿದೆ ಎಂದು ಶಾಸಕ ಎಸ್.ಎನ್.ಕೃಷ್ಣಯ್ಯಶೆಟ್ಟಿ ತಿಳಿಸಿದ್ದಾರೆ.
ಸೋಮವಾರ ತಾಲೂಕಿನ ತೂರ್ನಹಳ್ಳಿ ಗ್ರಾಮದಲ್ಲಿ ನೂತನ ಸರ್ಕಾರಿ ಆರೋಗ್ಯ ಕೇಂದ್ರ ಉದ್ಘಾಟಿಸಿ ಮಾತನಾಡಿದರು.
ಎಲ್ಲ ರೀತಿಯ ಐಶ್ವರ್ಯಕ್ಕಿಂತ ಮನುಷ್ಯನಿಗೆ ಆರೋಗ್ಯ ಭಾಗ್ಯ ಮುಖ್ಯ. ಮನುಷ್ಯ ಜೀವಿಸುವುದಕ್ಕಾಗಿ ಐಶ್ಪರ್ಯ ಸಂಪಾದಿಸಬೇಕು. ಆದರೆ, ಸಂಪಾದಿಸುವ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ ಎಂದರು.  ತಾಲೂಕಿನ ಎಲ್ಲ ಆರೋಗ್ಯ ಕೇಂದ್ರಗಳನ್ನು ತಲಾ ಒಂದು ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಎಲ್ಲ ಕೇಂದ್ರಗಳಲ್ಲಿನ ಮೂಲಭೂತ ಸೌಕರ್ಯ ಅಭಿವೃದ್ಧಿಪಡಿಸಲಾಗಿದೆ ಎಂದರು.
ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ವತ್ರೆ 2.5 ಕೋಟಿ ರು.ಗಳಲ್ಲಿ ನೂರು ಬೆಡ್‌ಗಳ ಆಸ್ವತ್ರೆಗಳಾಗಿ ಮಾರ್ಪಟಿಸಲಾಗುತ್ತಿದೆ ಎಂದರು. ಹೆಚ್ಚು ಸೌಕರ್ಯವಿಲ್ಲದ ಈ ಭಾಗದಲ್ಲಿ ಸರ್ಕಾರಿ ಆರೋಗ್ಯ ಕೇಂದ್ರ ಸ್ಥಾಪಿಸಲು ಬೇಕಾದ 2 ಎಕರೆ ಜಮೀನನ್ನು ಗುರ್ತಿಸಲಾಗಿದ್ದು, ಶೀಘ್ರವಾಗಿ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದರು.  
ಜಿಲ್ಲಾ ವೈದ್ಯಾಧಿಕಾರಿ ಡಾ.ಪ್ರಕಾಶ್ ಕುಮಾರ್ ಮಾತನಾಡಿದರು. ಇದೇ ಸಂಧರ್ಭದಲ್ಲಿ ತಾ.ಪಂ. ಮಾಜಿ ಸದಸ್ಯ ರಾಮಯ್ಯ, ಚೆನ್ನವೀರ ದೇವರು, ಗೋವಿಂದಪ್ಪ,ತಿಮ್ಮರಾಯಪ್ಪ, ವೆಂಕಟಗಿರಿಯಪ್ಪ, ಕೃಷ್ಣಪ್ಪ ಸೇರಿದಂತೆ 30 ದಾನಿಗಳನ್ನು ಶಾಸಕ ಕೃಷ್ಣಯ್ಯ ಶೆಟ್ಟಿ ಸನ್ಮಾನಿಸಿದರು.  ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಸನ್ನ ಕುಮಾರ್, ಜಿ.ಪಂ. ಸದಸ್ಯರಾದ ರಾಮಸ್ವಾಮಿರೆಡ್ಡಿ, ಯಲ್ಲಮ್ಮ, ತಾಪಂ ಅಧ್ಯಕ್ಷ ಚಂದ್ರಣ್ಣ, ಉಪಾಧ್ಯಕ್ಷೆ ನಾಗವೇಣಿ, ಪಾರ್ವತಮ್ಮ ಕಲಾವಿದ ಸ್ವಾಮಿ, ಗ್ರಾಪಂ ಅಧ್ಯಕ್ಷ ಮುನಿಶ್ಯಾಮಿ, ಮಾಜಿ ಅದ್ಯಕ್ಷ ನಾರಾಯಣಸ್ವಾಮಿ,ಸೋಮಣ್ಣ,ಮುಖಂಡ ತಿಪ್ಪಯ್ಯ ಇದ್ದರು.ತಾ.ಪಂ.ಸಾಮಾಜಿಕ ನ್ಯಾಯ ಸಮಿತಿ ಅದ್ಯಕ್ಷ ಎಸ್.ವಿ.ಲೋಕೇಶ್ ಸ್ವಾಗತಿಸಿ, ನಿರೂಪಿಸಿದರು.
ಬಂದ್ ನಡುವೆ ಉದ್ಘಾಟನೆ: ರಾಜ್ಯಾದ್ಯಂತ ವೈದ್ಯರ ಮುಷ್ಕರ ನಡುವೆ ತಾಲೂಕಿನ ತೂರ್ನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಆರೋಗ್ಯ ಕೇಂದ್ರ ಪ್ರಾರಂಭವಾಗಿದ್ದು, ಪ್ರಾರಂಭ ದಿನದಂದೇ ಬಂದ್ ಸಹ ಆಯಿತು. ಉದ್ಘಾಟನೆ ಸಮಾರಂಭದಲ್ಲಿ ಜಿಲ್ಲಾ ವೈದ್ಯಾಧಿಕಾರಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದಿದ್ದರು.
ಕಾರ್ಯಕ್ರಮ ಮುಗಿದು ಗಣ್ಯರೆಲ್ಲ ಹೋದ ಮೇಲೆ ತಪಾಸಣೆ ಕಾರ್ಯ ಮುಂದುವರೆಯಲಿಲ್ಲ. ಇನ್ನೆರಡು ದಿನಗಳಲ್ಲಿ ಮುಷ್ಕರ ನಿಲ್ಲಲಿದ್ದು, ನಂತರ ದಿನಗಳಲ್ಲಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.