ಏನಿಗದಲ ನವೋದಯ ಬಂದ್

Updated on: 

ಕೋಲಾರ: ನವೋದಯ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವುದರಿಂದ ಶಾಲೆಯಲ್ಲಿ ಮಕ್ಕಳಿಗೆ ಪಾಠ-ಪ್ರವಚನ ಇಲ್ಲದಂತಾಗಿರುವುದರಿಂದ ತಾವು ಮಧ್ಯ ಪ್ರವೇಶ ಮಾಡಿ ಸಮಸ್ಯೆ ನಿವಾರಣೆ ಮಾಡಬೇಕೆಂದು ಪೋಷಕರು ಮಂಗಳವಾರ ಜಿಲ್ಲಾಧಿಕಾರಿ ಡಾ.ಡಿ.ಎಸ್. ವಿಶ್ವನಾಥ್ ಅವರಿಗೆ ಮನವಿ ಸಲ್ಲಿಸಿದರು.
ನವೋದಯ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಪಾಠ ನಿಂತಿದೆ. ಮಕ್ಕಳು ಶಾಲೆ ಬಂದ್ ಆಗಿರುವುದರಿಂದ ಮನೆಗಳಿಗೆ ವಾಪಸ್ ಬಂದಿರುವುದರಿಂದ ಮಕ್ಕಳ ಭವಿಷ್ಯ ಅಡಕತ್ತರಿಯಲ್ಲಿ ಸಿಕ್ಕಿದಂತಾಗಿದೆ. ಜಿಲ್ಲಾ ಆಡಳಿತ ಕೂಡಲೇ ನವೋದಯ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿಯೊಂದಿಗೆ ಚರ್ಚಿಸಿ ಸಮಸ್ಯೆ ನಿವಾರಣೆ ಮಾಡದಿದ್ದರೆ ಪರೀಕ್ಷಾ ಕಾಲದಲ್ಲಿ ಮಕ್ಕಳಿಗೆ ಇನ್ನಷ್ಟು ಸಮಸ್ಯೆ ಆಗುತ್ತದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.
ಏನಿಗದಲದ ನವೋದಯ ಶಾಲೆಯಲ್ಲಿ 6 ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ 484 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸುಮಾರು 10 ದಿನಗಳಿಂದ ಇಲ್ಲಿನ ಸಿಬ್ಬಂದಿ ಮತ್ತು ಶಿಕ್ಷಕರು ಪ್ರತಿಭಟನೆ ನಡೆಸುತ್ತಿರುವುದರಿಂದ ಶಾಲೆಯಿಂದ ಮಕ್ಕಳನ್ನು ಮನೆಗಳಿಗೆ ಕಳಿಸಿಕೊಟ್ಟಿದ್ದಾರೆಂದು ಪೋಷಕರು ದೂರಿದ್ದಾರೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ 10 ದಿನಗಳು ಮಾತ್ರ ಬಾಕಿ ಇದ್ದು,  ಮಕ್ಕಳ ಭವಿಷ್ಯ ಏನಾಗಬೇಕೆಂದು ಪೋಷಕರು ಪ್ರಶ್ನಿಸಿ, ಮಕ್ಕಳ ಹಿತ ಕಾಪಾಡಲು ಮನವಿ ಮಾಡಿದ್ದಾರೆ.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ. ಡಿ.ಎಸ್. ವಿಶ್ವನಾಥ್, ಈ ಬಗ್ಗೆ ಸಂಬಂಧಿಸಿದ ಮೇಲಾಧಿಕಾಗಳ ಜತೆ ಚರ್ಚಿಸಿ ಶೀಘ್ರ ಕ್ರಮ ತೆಗೆದುಕೊಂಡು ಶಾಲೆ ಮತ್ತೆ ಪ್ರಾರಂಭವಾಗುವುದಕ್ಕೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಎಸ್.ಕೆ. ನಾಗರಾಜ್, ವಸಂತ ಸ್ವಾಮಿ, ಸುಭ್ರಮಣ್ಯ, ರಾಜಣ್ಣ, ಕೆ.ಎನ್. ಶ್ರೀರಾಮಪ್ಪ, ತುಳಸಿರಾಮ್, ಕೆ. ಸುರೇಶ್‌ಗೌಡ,ಬಿ.ಎಂ. ಸುಜಾತ ಮತ್ತಿತರು ಭಾಗವಹಿಸಿದ್ದರು.
2004 ರ ನಂತರ ಕೇಂದ್ರ ಸರ್ಕಾರಕ್ಕೆ ಸೇರಿದ ನೌಕರರಿಗೆ ನಿವೃತ್ತಿ ವೇತನ ಸೌಲಭ್ಯ ನಿಲ್ಲಿಸಿರುವುದರಿಂದ ನವೋದಯ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿ ಪ್ರತಿಭಟನೆಯಲ್ಲಿ ತೊಡಗುವುದಕ್ಕೆ ಕಾರಣವೆನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com