ಕೋಲಾರ: ಫೆ.13 ರಂದು ಬೆಳಿಗ್ಗೆ 11.30ಕ್ಕೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಲ್ಸ್ ಪೋಲಿಯೋ ಚಾಲನಾ ಸಮಿತಿಯ ಸಭೆ ಕರೆಯಲಾಗಿದೆ.
ಇಂದು ವಿದ್ಯುತ್ ವ್ಯತ್ಯಯ
ಕೋಲಾರ: ನಗರ ಸೇರಿದಂತೆ ಟಮಕದಲ್ಲಿ ವಿದ್ಯುತ್ ಸರಬರಾಜು ಅಭಿವೃದ್ಧಿ ಸಲುವಾಗಿ ಹಾಲಿ ಇರುವ ವಿದ್ಯುತ್ ಮಾರ್ಗ ಉನ್ನತಿಗೇರಿಸಲು ಕಾಮಗಾರಿ ನಡೆಸುವುದರಿಂದ ಫೆ.13 ರಂದು ಟಮಕ ಕೈಗಾರಿಕಾ ಪ್ರದೇಶ, ಟಮಕ ಗ್ರಾಮದ ಸುತ್ತಮುತ್ತ ಪ್ರದೇಶಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕೋಲಾರ ನಗರ ಉಪ-ವಿಭಾಗದ ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸ್ಥಾಯಿ ಸಮಿತಿ
ಚುನಾವಣೆ ನಿಗದಿ
ಕೋಲಾರ: ಫೆ.18 ರಂದು ನಡೆಯಲಿರುವ ಕೋಲಾರ ಜಿಲ್ಲಾ ಪಂಚಾಯತ್ ವಿವಿಧ ಸ್ಥಾಯಿ ಸಮಿತಿಗಳ ಚುನಾವಣೆಗಾಗಿ ವೇಳಾಪಟ್ಟಿ ಪ್ರಕಟಿಸಲಾಗಿದೆ. ಬೆಳಿಗ್ಗೆ 9ರಿಂದ11 ಗಂಟೆಯವರೆಗೆ ನಾಮ ಪತ್ರಗಳನ್ನು ಸ್ವೀಕಾರ, ಬೆಳಿಗ್ಗೆ 11ರಿಂದ 11.30ರವರೆಗೆ ನಾಮಪತ್ರಗಳ ಪರಿಶೀಲನೆ.11.30 ರಿಂದ 12 ಗಂಟೆಯವರೆಗೆ ನಾಮ ಪತ್ರಗಳನ್ನು ಹಿಂದಕ್ಕೆ ಪಡೆಯುವುದು. ಸಾಮಾನ್ಯ ಸ್ಥಾಯಿ ಸಮಿತಿಯ 4 ಮಂದಿ ಸದಸ್ಯರು, ಹಣಕಾಸು, ಲೆಕ್ಕಪರಿಶೋಧನೆ ಹಾಗೂ ಯೋಜನಾ ಸ್ಥಾಯಿ ಸಮಿತಿಯ 4, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ5 , ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ5, ಕೃಷಿ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ5 ಮಂದಿ ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆಯಲಿದೆ. ಸ್ಥಾಯಿ ಸಮಿತಿಗೆ ಸದಸ್ಯರನ್ನು ಜಿ.ಪಂ ಸದಸ್ಯರು ಕೈಎತ್ತುವ ಮೂಲಕ ಆಯ್ಕೆ ಮಾಡಬೇಕಾಗಿದ್ದು ಇದಕ್ಕಾಗಿ ಮಧ್ಯಾಹ್ನ 1 ರಿಂದ 4 ಗಂಟೆವರೆಗೆ ಮತದಾನಕ್ಕೆ ವೇಳೆ ನಿಗದಿ ಪಡಿಸಲಾಗಿದೆ.