ನೀರು ಪೂರೈಸಲು ರು. 23 ಕೋಟಿ ಬಿಡುಗಡೆ
ಕೋಲಾರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಸುಮಾರು 180 ಗ್ರಾಮಗಳಲ್ಲಿ ನೀರಿನ ವ್ಯವಸ್ಥೆಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ಗ್ರಾಮೀಣ ನೀರು ಸರಬರಾಜು ಯೋಜನೆಯಡಿ 23 ಕೋಟಿ ರು. ಬಿಡುಗಡೆ ಮಾಡಿದೆ ಎಂದು ಜಿಲ್ಲಾಧಿಕಾರಿ ಡಾ.ಡಿ.ಎಸ್. ವಿಶ್ವನಾಥ್ ತಿಳಿಸಿದರು.
ಅವರು ಮಂಗಳವಾರ ತಮ್ಮನ್ನು ಭೇಟಿಯಾಗಿದ್ದ ಸುದ್ದಿಗಾರರೊಂದಿಗೆ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ನೀರು ಒದಗಿಸಲು ಹೆಚ್ಚುವರಿ ಕ್ರಿಯಾಯೋಜನೆಯಡಿಯಲ್ಲಿ ಜಿಲ್ಲಾ ಪಂಚಾಯಿತಿಗೆ ಬಿಡುಗಡೆ ಆಗಿರುವ ಅನುದಾನದಲ್ಲಿ ಹೊಸ ಕೊಳವೆ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಹಣ ವಿನಿಯೋಗ ಮಾಡಲಾಗುವುದೆಂದು ಹೇಳಿದರು.
ಜಿಲ್ಲೆಯ 180 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವುದರಿಂದ ಕೇಂದ್ರ ಸರ್ಕಾರ ಜಿಲ್ಲಾ ಪಂಚಾಯಿತಿ ಮೂಲಕ 23 ಕೋಟಿ ರು. ಬಿಡುಗಡೆ ಮಾಡಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಆಡಳಿತಾತ್ಮಕ ಜವಾಬ್ದಾರಿಯನ್ನು ಜಿಲ್ಲಾ ಪಂಚಾಯಿತಿಗೆ ವಹಿಸಲಾಗಿದೆ ಎಂದರು.
ಕೊಳವೆಬಾವಿ ಕೊರೆಸುವುದು,ಪಂಪ್ ಮೋಟಾರ್, ಪೈಪ್ಲೈನ್ ಅಳವಡಿಕೆಗೆ ಈ ಹಣವನ್ನು ವಿನಿಯೋಗಿಸಲಾಗುವುದು ಎಂದ ಜಿಲ್ಲಾಧಿಕಾರಿಗಳು 220 ಹೊಸ ಕೊಳವೆಬಾವಿ ಕೊರೆಸಲು ಕ್ರಿಯಾ ಯೋಜನೆ ತಯಾರಿಸಲಾಗಿದೆ ಎಂದು ಹೇಳಿದರು.
ಬಂಗಾರಪೇಟೆ ತಾಲೂಕಿನ 73 ಗ್ರಾಮ, ಕೋಲಾರ- 42, ಮಾಲೂರು- 38, ಮುಳಬಾಗಲು -42 ಮತ್ತು ಶ್ರೀನಿವಾಸಪುರ ತಾಲೂಕಿನ -17 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ಮಾಹಿತಿ ನೀಡಿದರು.
17 ಕೋಟಿ ಪ್ರಸ್ತಾವನೆ: ಮುಂಬರುವ ಮೇ, ಜೂನ್ ಮತ್ತು ಜುಲೈ ತಿಂಗಳಲ್ಲಿ ನೀರಿನ ಸಮಸ್ಯೆ ಎದುರಿಸಲು ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಸರ್ಕಾರಕ್ಕೆ 17 ಕೋಟಿ ರು.ಗಳ ಪ್ರಸ್ತಾವನೆ ಕಳುಹಿಸಲಾಗಿದೆ ಎಂದ ಜಿಲ್ಲಾಧಿಕಾರಿಗಳು, ಸಕಾಲದಲ್ಲಿ ಮಳೆ ಬಾರದಿದ್ದರೆ ಮೇ ಮತ್ತು ಜುಲೈ ತಿಂಗಳಲ್ಲಿ ಜಿಲ್ಲೆಯ ಬಂಗಾರಪೇಟೆ -ತಾಲೂಕಿನ 100 ಗ್ರಾಮ, ಕೋಲಾರ -100, ಮಾಲೂರು -86, ಮುಳಬಾಗಲು- 86 ಮತ್ತು ಶ್ರೀನಿವಾಸಪುರ ತಾಲೂಕಿನ 50 ಗ್ರಾಮಗಳಲ್ಲಿ ನೀರಿನ ಸಮಸ್ಯೆ ತೀವ್ರಗೊಳ್ಳುವ ಸಾಧ್ಯತೆಗಳಿರುವುದರಿಂದ ಈಗಲೇ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

