ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶಿಕ್ಷಕರ ಪ್ರತಿಭಟನೆ
ಚಿಕ್ಕಬಳ್ಳಾಪುರ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸರ್ಕಾರಿ ಶಾಲಾ ಶಿಕ್ಷಕರು ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಾಂಕೇತಿಕ ಧರಣಿ ನಡೆಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢಶಾಲಾ ಶಿಕ್ಷಕರು, ಪದವಿಪೂರ್ವ ಉಪನ್ಯಾಸಕರಿಗೆ ಈಗ ನೀಡುವ ವಿಶೇಷ ವೇತನವನ್ನು ಮೂಲ ವೇತನದಲ್ಲಿ ವಿಲೀನಗೊಳಿಸಬೇಕು. ಈಗಿರುವ ವೇತನ ತಾರತಮ್ಯ ನೀತಿಯನ್ನು ಹೋಗಲಾಡಿಸಬೇಕು. ಬೆಂಗಳೂರು ನಗರಕ್ಕೆ ಮನೆ ಬಾಡಿಗೆ ಭತ್ಯೆ ಹೆಚ್ಚಳ ಮಾಡಿದ ರೀತಿಯಲ್ಲಿ ಗ್ರಾಮೀಣ, ಪಟ್ಟಣ ಪ್ರದೇಶಗಳಲ್ಲೂ ಸಹ ಮನೆ ಬಾಡಿಗೆ ಭತ್ಯೆ ಹೆಚ್ಚಿಸಬೇಕು ಸೇರಿದಂತೆ ಮುಂತಾದ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು.
ಹಿಂದಿನಿಂದಲೂ ವೇತನ ತಾರತಮ್ಯ ನಿವಾರಿಸುವಂತೆ ಮತ್ತು ವಿಶೇಷ ವೇತನವನ್ನು ಮೂಲ ವೇತನದಲ್ಲೇ ವಿಲೀನಗೊಳಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.
ಆದರೆ ಸರ್ಕಾರ ಆಯವ್ಯಯ ಮಂಡನೆ ಸಂದರ್ಭದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಬೆಂಗಳೂರು ನಗರಕ್ಕೆ ಈಗಿರುವ ಮನೆ ಬಾಡಿಗೆ ಭತ್ಯೆಯನ್ನು ಹೆಚ್ಚಿಸಿದ್ದು, ಇದರಿಂದ ಗ್ರಾಮೀಣ ಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ 5 ಲಕ್ಷ ಶಿಕ್ಷಕ ನೌಕರರನ್ನು ಕಡೆಗಣಿಸಿದಂತಾಗಿದೆ ಎಂದು ಧರಣಿ ನಿರತ ಶಿಕ್ಷಕರು ಆರೋಪಿಸಿದರು.
ಧರಣಿಯಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಕೆ.ಎಲ್. ಶ್ರೀನಿವಾಸ್, ಗೋಪಾಲ ರೆಡ್ಡಿ, ಈಶ್ವರರೆಡ್ಡಿ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

