ಕೋಲಾರ: ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಸಹಕಾರ ಬೇಕೇ ಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಎಚ್.ಜಯದೇವ್ ಅಭಿಪ್ರಾಯಪಟ್ಟಿದ್ದಾರೆ. ನಗರದ ರೈತ ಸಭಾಂಗಣದಲ್ಲಿ ಸಹಕಾರ ಮಹಾಮಂಡಳದ ಸಿಬ್ಬಂದಿಗಾಗಿ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಿಬಂಧಕ ಡಾ.ಕೃಷ್ಣಯ್ಯಗೌಡ ಉಪಸ್ಥಿತರಿದ್ದರು.