ಮರ ಗಿಡ ರಕ್ಷಣೆಗೆ ಒತ್ತಾಯಿಸಿ ಪ್ರತಿಭಟನೆ
ಬಾಗೇಪಲ್ಲಿ: ಮರ ಗಿಡಗಳ ನಾಶದಿಂದ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮರಗಿಡಗಳ ಸಂರಕ್ಷಣೆಗೆ ಒತ್ತು ಕೊಡಬೇಕೆಂದು ಒತ್ತಾಯಿಸಿ ನವ ಕರ್ನಾಟಕ ನವ ನಿರ್ಮಾಣ ವೇದಿಕೆ ಕಾರ್ಯಕರ್ತರು ವಲಯ ಅರಣ್ಯಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು.
ಡಾ.ಹೆಚ್.ಎನ್.ವೃತ್ತದಿಂದ ಮೆರವಣಿಗೆ ಬಂದ ಕಾರ್ಯಕರ್ತರು ಅರಣ್ಯ ಇಲಾಖೆ ಮುತ್ತಿಗೆ ಹಾಕಿದರು. ನಂತರ ಜಿಲ್ಲಾಧ್ಯಕ್ಷ ಜಿ.ಪಿ. ಬರಕತ್ ಮಾತನಾಡಿ, ತಾಲೂಕಿನಲ್ಲಿ ಮರಗಿಡಗಳ ಮಾರಣ ಹೋಮ ತಡೆಯುವಲ್ಲಿ ವಲಯ ಅರಣ್ಯಾಧಿಕಾರಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಅರಣ್ಯ ಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ಮರಗಳನ್ನು ಬೆಳೆಸುವ ಬದಲಿಗೆ ಮರಗಳನ್ನು ಹೊಡೆದು ಉರುಳಿಸುವ ಮೂಲಕ ಮರಗಳ ಮಾರಣಹೋಮ ಪ್ರತಿನಿತ್ಯ ನಡೆಯುತ್ತಿರುವುದರಿಂದ ಅಂತರ್ಜಲದ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. 700-800 ಅಡಿ ಕೊಳವೆ ಬಾವಿ ಕೊರೆಸಿದರೂ ಶುದ್ಧ ಕುಡಿಯುವ ನೀರು ಸಿಗುವುದು ಕಷ್ಟವಾಗಿದೆ. ಪ್ರತಿ ದಿನ ಲೋಡುಗಟ್ಟಲೇ ಲಾರಿ, ಟ್ರ್ಯಾಕ್ಟರ್ ಮೂಲಕ ಮರದ ದಿಮ್ಮಿಗಳು ಸಾಗಣೆ ಮಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಅರಣ್ಯ ಅಧಿಕಾರಿಗಳು ಇದೇ ರೀತಿಯಲ್ಲಿ ನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಈ ಸಂದರ್ಭದಲ್ಲಿ ಎಚ್ಚರಿಸಿದರು. ನಂತರ ಉಪವಲಯ ಅರಣ್ಯಾಧಿಕಾರಿಗೆ ಮನವಿ ಸಲ್ಲಿಸಿದರು. ತಾಲೂಕು ಘಟಕ ಅಧ್ಯಕ್ಷ ಆರ್.ವೆಂಕಟೇಶ್, ಜಮೀವುಲ್ಲಾ, ಅಥಾವುಲ್ಲಾ, ರಾಮಾಂಜನೇಯಲು, ಹನುಮಂತರೆಡ್ಡಿ , ಮುನಿಸ್ವಾಮಿ, ವಶೀರ್ ಬಾಷ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

