ಕೋಲಾರ

ಪ್ರತ್ಯೇಕ ಪ್ರಕರಣ: 2 ಚಿನ್ನದ ಸರ ಅಪಹರಣ

Published On :

ಕೋಲಾರ: ರಾಷ್ಟ್ರೀಯ ಹೆದ್ದಾರಿ-4ರ ಸರ್ವೀಸ್ ರಸ್ತೆಯಲ್ಲಿರುವ ಬಿ.ಜಿ.ಎಸ್.ಕಾಲೇಜಿನ ಬಳಿ ಗುರುವಾರ ಬೆಳಿಗ್ಗೆ ವಾಯು ವಿಹಾರಕ್ಕೆ ಹೊರಟಿದ್ದ ಮಹಿಳೆಯ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಕಳ್ಳರು ಅಪಹರಿಸಿದ್ದಾರೆ. ಕೋಲಾರ ನಗರದ ಜಯನಗರದ ವಾಸಿ ಲಲಿತಮ್ಮ ಎಂಬುವರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚತ ವ್ಯಕ್ತಿಗಳು ಲಲಿತಮ್ಮ ರವರ ಕತ್ತಿನಲ್ಲಿದ್ದ 1 ಲಕ್ಷ ರು.ಬೆಲೆ ಬಾಳುವ 35 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಶಿಡ್ಲಘಟ್ಟ: ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿಯೊಬ್ಬರಿಂದ ಅಪರಿಚಿತರಿಬ್ಬರು ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.  ಶಿಕ್ಷಕಿಯಾದ ಲಕ್ಷ್ಮೀಕಾಂತಮ್ಮ ಮಧ್ಯಾಹ್ನ ಊಟ ಮುಗಿಸಿ ಶಾಲೆಗೆ ವಾಪಸ್ ಬರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತರು ಶಿಕ್ಷಕಿಯ ಕತ್ತಿನಲ್ಲಿದ್ದ ಸುಮಾರು 30 ಗ್ರಾಂ ಚಿನ್ನದ ಸರವನ್ನು ಕಿತ್ತುಕೊಂಡು ವೇಗವಾಗಿ ಪರಾರಿಯಾಗಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.