ಚಿಂತಾಮಣಿ ಎಪಿಎಂಸಿಗೆ ಆಯ್ಕೆ
ಚಿಂತಾಮಣಿ: ಇಲ್ಲಿನ ಎಪಿಎಂಸಿ 2ನೇ ಅವಧಿಗೆ ಅಧ್ಯಕ್ಷರಾಗಿ ಸೋಮುಕಲಹಳ್ಳಿ ಗ್ರಾಮದ ನಾರಾಯಣಸ್ವಾಮಿ ಆಯ್ಕೆಯಾಗಿದ್ದಾರೆ.
ಪಟ್ಟಣದ ಎಪಿಎಂಸಿ ಕಾರ್ಯಾಲಯದಲ್ಲಿ 2ನೇ ಅವಧಿಗೆ ಬಟ್ಲಹಳ್ಳಿ ಗ್ರಾಮ ಪಂಚಾಯ್ತಿಯ ಸೋಮುಕಲಹಳ್ಳಿ ಗ್ರಾಮದ ಬೋರ್ವೆಲ್ ನಾರಾಯಣಸ್ವಾಮಿ ಅವಿರೋಧ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಏನಿಗದಲೆ ಗ್ರಾಮ ಪಂಚಾಯ್ತಿಯ ಗೊಲ್ಲರಗುಡ್ಡ ಗ್ರಾಮದ ರತ್ನಮ್ಮ ಆಯ್ಕೆಯಾದರು.
ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಶಾಸಕ ಎಂ.ಸಿ.ಸುಧಾಕರ್ ಬೆಂಬಲಿತ ಮುಖಂಡರು ಹಾಗೂ ಕಾರ್ಯಕರ್ತರು ನಗರ ಪ್ರಮುಖ ಬೀದಿಗಳಲ್ಲಿ ಪಟಾಕಿ ಸಿಡಿಸಿ,ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ನಂತರ ಮಾಳಪ್ಪಲ್ಲಿಯ ಅಂಜನಿ ನಿವಾಸದಲ್ಲಿ ಶಾಸಕ ಡಾ.ಎಂ.ಸಿ.ಸುಧಾಕರ್ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುಧಾಕರ್, ಎಪಿಎಂಸಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ಕೊಟ್ಟು ಎಲ್ಲಾ ಸದಸ್ಯರ ವಿಶ್ವಾಸ ಪಡೆದು ಒಗ್ಗಟ್ಟಿನಿಂದ ನೀಡಿರುವ ಸ್ಥಾನಗಳನ್ನು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷ ಸ್ಥಾನಕ್ಕಾಗಿ ನಡೆದಿತ್ತು ಲಾಬಿ: ಎಪಿಎಂಸಿ ವಿರೋಧ ಪಕ್ಷದ ಬೆರಳೆಣಿಕೆ ಸದಸ್ಯರು ಸೇರಿ ಶಾಸಕ ಬೆಂಬಲಿತ ಸದಸ್ಯರಿಗೆ ಆಸೆ ಆಮಿಷ ತೋರಿಸಿ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಕಸರತ್ತು ನಡೆಸಿದ ವಿರೋಧ ಪಕ್ಷದ ಮುಖಂಡರಿಗೆ ಮುಖಭಂಗವಾಗಿದೆ. ಎಲ್ಲಾ ಸದಸ್ಯರ ಒಗ್ಗಟ್ಟಿನಿಂದ ಇಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಮಾಡಲು ಸಹಕರಿಸಿದ ಎಲ್ಲಾ ಸದಸ್ಯರನ್ನು ಅಭಿನಂದಿಸುವುದಾಗಿ ಶಾಸಕರು ತಿಳಿಸಿದರು.
ತಾಪಂ ಅಧ್ಯಕ್ಷೆ ಕೆ.ವಿ.ಮೀನಾಶ್ರೀರಾಮರೆಡ್ಡಿ, ಉಪಾಧ್ಯಕ್ಷ ಸುಲ್ತಾನ್ ಷರೀಫ್, ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಮಾದ ಮಂಗಲ ಚಂದ್ರಪ್ಪ, ಮುಖಂಡರಾದ ವೆಂಕಟಶಿವಾರೆರೆಡ್ಡಿ, ಸತ್ಯನಾರಾಯಣರೆಡ್ಡಿ, ಬಾಬುರೆಡ್ಡಿ, ಚಲನ್ನ, ಶ್ರೀನಿವಾಸ್,ಲಕ್ಷ್ಮಿನಾರಾಯಣರೆರೆಡ್ಡಿ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

