ಕಲ್ಲು ಗಣಿಗಾರಿಕೆ: ಶೀಘ್ರ ಕ್ರಮ (ಸುದ್ದಿ ಸಂಕ್ಷೇಪ )
ವಿಧಾನಸಭೆ: ಬಾಗೆಪಲ್ಲಿಯ ಗುಡಿಬಂಡೆ, ವರಲಕೊಂಡದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಸುತ್ತುಮುತ್ತಲನ ಕಲ್ಲುಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಇದರ ಮುಂದಿನ ಕ್ರಮಕ್ಕೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಟಾಸ್ಕ್‌ಫೋರ್ಸ್ ರಚಿಸಲಾಗಿದ್ದು, ಶೀಘ್ರವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಸುರೇಶ್‌ಕುಮಾರ್ ತಿಳಿಸಿದರು., ಬಾಗೇಪಲ್ಲಿಯ ಎನ್. ಸಂಪಂಗಿ ವಿಷಯ ಪ್ರಸ್ತಾಪಿಸಿ, 2ನೇ ಬಾರಿ ಇದೇ ಉತ್ತರ ನೀಡಿದ್ದೀರಿ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಪರವಾಗಿ ಉತ್ತರ ನೀಡಿದ ಸಚಿವರು, ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ನವೋದಯ ಸಿಬ್ಬಂದಿಮುಷ್ಕರ 9ನೇ ದಿನಕ್ಕೆ
ಚಿಂತಾಮಣಿ: ಜವಾಹರ ನವೋದಯ ವಿದ್ಯಾಲಯ ಸಿಬ್ಬಂದಿನಡೆಸುತ್ತಿರುವ ಅನಿರ್ದಿಷ್ಟ ಅವಧಿ ಮುಷ್ಕರ ಇಂದಿಗೆ 9 ದಿನಕ್ಕೆ ಕಾಲಿಟ್ಟಿದೆ. ತಹಸೀಲ್ದಾರ್ ಎಂ.ಎನ್.ಮಂಜುನಾಥ್ ಗುರುವಾರ ಶಾಲೆಗೆ ಭೇಟಿ ನೀಡಿ ಸಿಬ್ಬಂದಿ ಜೊತೆ ಚರ್ಚಿಸಿದರು. ಶಾಲೆಯ ಸಿಬ್ಬಂದಿ ನಿವೃತ್ತಿ ವೇತನ ಒಳಗೊಂಡಂತೆ ಒಟ್ಟು 23 ಬೇಡಿಕೆಗಳನ್ನು ಈಡೇರಿಸುವಂತೆ ಹಲವಾರು ಬಾರಿ ಮನವಿ ಮಾಡಿದ್ದರೂ, ಸಂಬಂಧಿಸಿದ ಅಧಿಕಾರಿಗಳು ಯಾವುದೇ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗದಿದ್ದರಿಂದ ಈ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದ್ದು, ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕೈ ಜೋಡಿಸಬೇಕೆಂದು ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.
ಹರೀಶ್ ಪುನರಾಯ್ಕೆ
ಚಿಕ್ಕಬಳ್ಳಾಪುರ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಘಟಕದ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಎರಡನೇ ಬಾರಿಗೆ ನಗರ ವಾಸಿ ಕೆ.ಹರೀಶ್ ಅವರನ್ನು ಆಯ್ಕೆ ಮಾಡಲಾಗಿದೆ. ಹರೀಶ್ ಅವರ ಸಂಘಟನೆ ಮತ್ತು ಮುಂದಾಳತ್ವವನ್ನು ಗಣನೆಗೆ ತೆಗೆದುಕೊಂಡು ಎ.ಬಿ.ವಿ.ಪಿ ರಾಜ್ಯಾಧ್ಯಕ್ಷ ವಸಂತ್ ಕುಮಾರ್‌ರವರು ಬೆಳಗಾವಿಯಲ್ಲಿ ನೆಡೆದ 32ನೇ ರಾಜ್ಯ ಸಮ್ಮೇಳನದಲ್ಲಿ ಸದಸ್ಯರನ್ನಾಗಿ ಮರು ಆಯ್ಕೆ ಮಾಡಿದ್ದಾರೆ ಎಂದು ಎ.ಬಿ.ವಿ.ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೇದರನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆ ಸಾವು
ಚಿಂತಾಮಣಿ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಯಗವಕೋಟೆ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಯಗವಕೋಟೆ ಗ್ರಾಮದ ವರಲಕ್ಷ್ಮಿ(24) ಎಂಬಾಕೆ ಕಳೆದ ಮೂರು ವರ್ಷಗಳ ಹಿಂದೆ ಗಂಡನನ್ನು ಬಿಟ್ಟು ಗ್ರಾಮದ ಬೇರೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ಹಲವು ತಿಂಗಳಿನಿಂದ ಅದೇ ಗ್ರಾಮದ ಶಿವ ಎಂಬವನ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

