ಶಾಂತಿ, ಸುವ್ಯವಸ್ಥಿತ ಚುನಾವಣೆಗೆ ಸಹಕರಿಸಿ
ಚಿಂತಾಮಣಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಸಮಯದಲ್ಲಿ ರಾಜ್ಯ ಚುನಾವಣಾ ಆಯೋಗ ಜಾರಿ ಮಾಡಿರುವ ನೀತಿ ಸಂಹಿತೆ ಕಡ್ಡಾಯವಾಗಿ ಪಕ್ಷದ ಮುಖಂಡರು ಹಾಗೂ ಸ್ಪರ್ಧೆ ಬಯಸುವ ಅಭ್ಯರ್ಥಿಗಳು ಕಾನೂನು ಪಾಲಿಸಬೇಕು. ಈ ಮೂಲಕ ನಗರಸಭೆ ಚುನಾವಣೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದು ತಾಲೂಕು ದಂಡಾಧಿಕಾರಿ ಎಂ.ಎನ್. ಮಂಜುನಾಥ್ ತಿಳಿಸಿದರು.
ನಗರದ ನಗರಸಭೆ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಧ್ಯಮ ಮಿತ್ರರಿಗೆ ರಾಜ್ಯ ಚುನಾವಣಾ ಆಯೋಗದ ನೀತಿ ಸಂಹಿತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಗರಸಭೆಯ 2012-13ನೇ ಸಾಲಿನ ಚುನಾವಣೆಗೆ ಸಂಬಂಧಿಸಿ ನಿಯಮ ನಿಬಂಧಗಳ ಬಗ್ಗೆ ವಿವರ ಮಾಹಿತಿ ನೀಡಿದರು.
ಸಂಹಿತೆ ಕಾಲಕಾಲಕ್ಕೆ ಬದಲಾಯಿಸಿ, ಹೆಚ್ಚುವರಿ ಸೂಚನೆ ಆಯೋಗವು ನೀಡದಲ್ಲಿ ಅವುಗಳನ್ನು ಪಾಲಿಸುವುದು ಸೇರಿದಂತೆ ಇನ್ನೂ ಹಲವು ನಿಯಮಗಳನ್ನು ಚುನಾವಣೆಗೆ ಸ್ಪರ್ಧಿಸುವ ಹಾಗೂ ರಾಜಕೀಯ ಪಕ್ಷದ ಜನಪ್ರತಿನಿಧಿಗಳು ಪಾಲಿಸಬೇಕೆಂದು ಕೋರಿದರು.
ನಂತರ ಮಾತನಾಡಿದ ನಗರಸಭಾ ಆಯುಕ್ತ ಡಾ. ರಾಮೇಗೌಡ ಸಾರ್ವಜನಿಕರ ಗಮನಕ್ಕೆ ಬರುವಂತಹ ಯಾವುದೇ ತೆರೆದ ಜಾಗದಲ್ಲಿ ಜಾಹಿರಾತನ್ನು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಪರವಾನಿಗೆ ಪಡೆಯದೆ ಆ ಸಂಸ್ಥೆ ವ್ಯಾಪ್ತಿಯಲ್ಲಿ ಜಾಹಿರಾತು ಪ್ರದರ್ಶನ ಮಾಡಿದ್ದಲ್ಲಿ ಅದು ಸಂಜ್ಞೆಯ ಅಪರಾಧವಾಗುತ್ತದೆ ಎಂದರು.
ತಾಲೂಕು ಮಟ್ಟದ ಅಧಿಕಾರಿಗಳಾದ ಡಾ. ಸುಬ್ರಾನಾಯಕ್, ನಾಗರಾಜ್, ನರಸಿಂಹಮೂರ್ತಿ, ಕಾಳಪ್ಪ ಮತ್ತಿತರ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

