ಮದನಹಳ್ಳಿ ಗ್ರಾಪಂ ಪಿಡಿಒ ಕರ್ತವ್ಯ ಲೋಪ ಖಂಡಿಸಿ ಪ್ರತಿಭಟನೆ, ಧರಣಿ
ಕೋಲಾರ: ತಾಲೂಕಿನ ಮದನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸರಿಯಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿಲ್ಲವೆಂದು ಆರೋಪಿಸಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ನೇತೃತ್ವದಲ್ಲಿ ಸೋಮವಾರ ಗ್ರಾ.ಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಯಿತು.
ಕಳೆದ ಫೆ.16 ರಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸಮ್ಮುಖದಲ್ಲಿ ನಡೆದ ಗ್ರಾ.ಪಂ ಸಭೆಯಲ್ಲಿ 2010-11ನೇ ಸಾಲಿನ ಬಸವ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರಗಳನ್ನು ನೀಡಲಾಗಿದ್ದು ಈ ಸಭೆಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು 6 ಸದಸ್ಯರನ್ನು ಸಭೆಗೆ ಅಹ್ವಾನಿಸದೆ ಪಿಡಿಒ ಕರ್ತವ್ಯ ಲೋಪ ಎಸಗಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಎಂಬ ಕಾರಣಕ್ಕೆ ಪಿಡಿಒ ನಿರ್ಲಕ್ಷಿಸಿದ್ದಾರೆ. ಅಧ್ಯಕ್ಷರ ಸ್ಥಾನಕ್ಕೆ ಅವಮಾನ ಮಾಡಲಾಗಿದೆ. ಪಿಡಿಒ ಶಾಸಕರ ಏಜೆಂಟರಂತೆ ವರ್ತಿಸುತ್ತಾ, ಗ್ರಾ.ಪಂ. ನೀತಿ ನಿಯಮಗಳನ್ನು ಗಾಳಿಗೆ ತೂರಿರುವುದರಿಂದ ಕಾನೂನು ಕ್ರಮ ಕೈಗೊಂಡು ಇವರನ್ನು ಎತ್ತಂಗಡಿ ಮಾಡಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ತಾಲೂಕು ಪಂಚಾಯತಿ ಸದಸ್ಯ ಮುಳ್ಳಹಳ್ಳಿ ಮಂಜುನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಮ್ಮ, ಉಪಾಧ್ಯಕ್ಷೆ ಸುಶೀಲಮ್ಮ, ಸದಸ್ಯರಾದ ಎಂ.ಆರ್. ನರೇಂದ್ರಬಾಬು, ಸದಸ್ಯರಾದ ಎಂ.ಕೆ.ಮಹೇಶ್, ಕೆ.ಪದ್ಮವತಮ್ಮ, ಮುನಿಶಾಮಪ್ಪ, ದೊಡ್ಡಮುನಿಶಾಮಪ್ಪ, ಮುನಿರಾಯಣಸ್ವಾಮಿ ಹಾಗೂ ಗ್ರಾ. ಪಂ. ವ್ಯಾಪ್ತಿಯ ಕಾಂಗ್ರೆಸ್ ಮುಖಂಡರಾದ ಚಂದ್ರೇಗೌಡ, ನಾರಾಯಣಗೌಡ, ಪ್ರಸಾದ್, ನರಸಿಂಹನಾಯ್ಕ, ಬಿ.ಜಿ. ರಮೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

