ವಸತಿ ಬಾಡಿಗೆ ಭತ್ಯೆ ತಾರತಮ್ಯ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾ. ಅಧ್ಯಕ್ಷ ಬಿ.ವಿ.ಶಿವಯ್ಯ ಟೀಕೆ
ಬಾಗೇಪಲ್ಲಿ: ನಗರ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಶಿಕ್ಷಕರಿಗೆ ಶೇ.25 ರಷ್ಟು ವಸತಿ ಬಾಡಿಗೆ ಭತ್ಯೆಯನ್ನು ಇತ್ತೀಚೆಗೆ ಬಿಡುಗಡೆಯಾದ ಆಯುವ್ಯಯದಲ್ಲಿ ಶೇ.30 ರಷ್ಟು ಏರಿಸಿದ್ದು ಗ್ರಾಮಾಂತರ ಪ್ರದೇಶದ ವಾಸ ಮಾಡುತ್ತಿರುವ ಶಿಕ್ಷಕರಿಗೆ ಕೇವಲ ಶೇ.7 ರಷ್ಟು ಮಾತ್ರ ಮನೆ ಬಾಡಿಗೆ ಭತ್ಯೆಯನ್ನು ಸರ್ಕಾರ ನೀಡುತ್ತಿರುವುದು ಖಂಡನೀಯ ಎಂದು ಅಖಿಲ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಿ.ವಿ.ಶಿವಯ್ಯ ಟೀಕಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ನಲ್ಲಿ ಮನೆ ಬಾಡಿಗೆ ಏರಿಸದಿರುವುದು ವಿಷಾದನೀಯ. ಪಕ್ಕದ ರಾಜ್ಯಗಳಾದ ಆಂಧ್ರ, ತಮಿಳನಾಡು, ಮಹಾರಾಷ್ಟ್ರ, ಕೇರಳ ಮುಂತಾದ ರಾಜ್ಯಗಳಲ್ಲಿ ನೀಡುತ್ತಿರುವ ವೇತವನ್ನು ಕರ್ನಾಟಕದಲ್ಲಿ ಶಿಕ್ಷಕರಿಗೆ ನೀಡುತ್ತಿಲ್ಲ. ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಬರೀ ವೇತನದಲ್ಲೇ ತಮ್ಮ ಕುಟುಂಬ ಪೋಷಣೆ ಮಾಡುತ್ತಿದ್ದು ಸರಕಾರ ತಾರತಮ್ಯ ನೀತಿಯನ್ನು ಅನುಸರಿಸುತ್ತಿದೆ.
ನಗರ ಪ್ರದೇಶದ ಶಿಕ್ಷಕರಿಗೆ ರಾಜ್ಯ ಸರಕಾರ ಎಲ್ಲಾ ಅನುಕೂಲಗಳನ್ನು ನೀಡಿ ಗ್ರಾಮೀಣ ಶಿಕ್ಷಕರಿಗೆ ಮಾತ್ರ ವಂಚಿಸುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶದ ಶಿಕ್ಷಕರ ಸಮಸ್ಯೆಗಳನ್ನು ಪರಿಗಣನೆಗೆ ತೆಗೆದುಕೊಳ್ಳದಿದ್ದ ಪಕ್ಷದಲ್ಲಿ ರಾಜ್ಯ ವ್ಯಾಪ್ತಿ ಉಗ್ರ ಹೋರಾಟ ನಡೆಸಲಾಗುವುದು ಎಂದರು. ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ಮಾತನಾಡಿ, ನಮ್ಮ ಸಂಘ ರಾಜ್ಯದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಒಳ್ಳೆಯ ಸ್ಪಂದನೆ ನೀಡುತ್ತಿದ್ದು ಗ್ರಾಮಾಂತರ ಶಿಕ್ಷಕರಿಗೆ ಮಾತ್ರ ಹೆಚ್ಚಿನ ಅದ್ಯತೆ ನೀಡುತ್ತಿದೆ ಎಂದ ಅವರು, ಸರ್ಕಾರ ಗ್ರಾಮಾಂತರ ಪ್ರದೇಶದಲ್ಲಿ ವಾಸ ಮಾಡುತ್ತಿರುವ ಶಿಕ್ಷಕರಿಗೆ ಮೂಲಭೂತ ಸೌಲಭ್ಯ ಸಮರ್ಪಕವಾಗಿ ನೀಡುತ್ತಿಲ್ಲ. ಪ್ರತಿ ಶಾಲೆಯಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಿದ್ದರೂ ಶಿಕ್ಷಕರು ಪ್ರಾಪ್ರಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದನ್ನರಿತು ಸರಕಾರ ಕೂಡಲೇ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸಿಕೊಡಬೇಕೆಂದು ಒತ್ತಾಯಿಸಿದರು. ವೇಣುಗೋಪಾಲ್, ಅಂಜನಪ್ಪ, ಮುನಿರ್ ಅಹಮದ್, ರಾಮಚಂದ್ರ, ಹಸನ್ಬಾಷ, ಕುಶಾಲ್ಕುಮಾರ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

