ಕೋಲಾರ

23 ವಾರ್ಡ್‌ಗೆ ಬಿಎಸ್‌ಆರ್ ಕಾಂಗ್ರೆಸ್ ಸ್ಪರ್ಧೆ

Published On :

ಗೌರಿಬಿದನೂರು: ಮಾರ್ಚ್ 7ರಂದು ನಡೆಯಲಿರುವ ಪುರಸಭಾ ಚುನಾವಣೆಯಲ್ಲಿ ಪಟ್ಟಣದ 23 ವಾರ್ಡ್‌ಗಳಲ್ಲಿ ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಮುಖಂಡ ಸೋಮಶೇಖರ್ ತಿಳಿಸಿದರು. ಅವರು  ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಈ ಚುನಾವಣೆಯಲ್ಲಿ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದರು. ತಮ್ಮ ಪಕ್ಷದಿಂದ ಅಭ್ಯರ್ಥಿಯಾಗಲು ಇಚ್ಚಿಸಿದವರು ತಮ್ಮನ್ನು ಸಂರ್ಕಿಸ ಬೇಕೆಂದು ಗುರುವಾರ ನಾಮಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು. ಮೂಲ ಸೌಲಭ್ಯಗಳ ಸಮಸ್ಯೆಯನ್ನು ನೀಗಿಸಲಾಗುವುದು ಎಂದರು.
6ನೇ ತರಗತಿ ಪ್ರವೇಶಕ್ಕೆ ಅರ್ಜಿ
ಚಿಂತಾಮಣಿ:  ಆದರ್ಶ ವಿದ್ಯಾಲಯದ 6ನೇ ತರಗತಿ ದಾಖಲಾತಿಗಾಗಿ ಅರ್ಜಿ ಸಲ್ಲಿಸಲು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ರಂಗಯ್ಯ ತಿಳಿಸಿದ್ದಾರೆ. ನಗರದ ನಕ್ಕುಂದಿಪೇಟೆ ಬಳಿ ಇರುವ ಆದರ್ಶ ವಿದ್ಯಾಲಯ (ಆಂಗ್ಲ ಮಾದ್ಯಮ) 6ನೇ ತರಗತಿಗೆ 2013-14 ನೇ ಸಾಲಿಗೆ ದಾಖಲಾತಿ ಸಂಬಂಧ ಅರ್ಜಿ ಸಲ್ಲಿಸಲು ತಾಲೂಕಿನಲ್ಲಿ ಪ್ರಸ್ತುತ 5ನೇ ತರಗತಿ ಓದುತ್ತಿರುವ ಸರ್ಕಾರಿ,ಅನುದಾನಿತ, ಅನುದಾನರಹಿತ ಶಾಲೆಗಳ ಶಾಲಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಮತ್ತು ಆದರ್ಶ ಶಾಲೆಯಲ್ಲಿ ಉಚಿತ ಅರ್ಜಿಗಳನ್ನು ಫೆ.18 ರಿಂದ 28 ರವರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ಪರೀಕ್ಷೆಯ ದಿನಾಂಕ 24-03-2013 ರಂದು ನಡೆಯಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಆರ್.ಎಂ.ಎಸ್.ಎ ನೋಡಲ್ ಅಧಿಕಾರಿಯಿಂದ ಪಡೆದುಕೊಳ್ಳಬಹುದು ಎಂದು ಕೆ.ಜಿ.ರಂಗಯ್ಯ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.