ಕೋಲಾರ

ಬಿಜೆಪಿ ಸರ್ಕಾರದ ಅಭಿವೃದ್ಧಿಯಲ್ಲಿ ರಾಜ್ಯ 10 ವರ್ಷ ಹಿಂದುಳಿದಿದೆ

Published On :

ಶಿಡ್ಲಘಟ್ಟ: ಬಿಜೆಪಿ ಸರ್ಕಾರದ ದುರಾಡಳಿತದಿಂದ ಅಭಿವೃಧ್ಧಿಯಲ್ಲಿ ರಾಜ್ಯ ಹತ್ತು ವರ್ಷ ಹಿಂದುಳಿದಿದೆ ಎಂದು ಕೆ.ಪಿ.ಸಿ.ಸಿ ಉಪಾಧ್ಯಕ್ಷ, ಶಾಸಕ ವಿ. ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಬೈಯಪ್ಪನಹಳ್ಳಿ ಗ್ರಾಮದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ನೆರವೇರಿಸಿ ವಿಶೇಷ ಘಟಕ ಯೋಜನೆಯಡಿ ಕುರಿಗಳನ್ನು ವಿತರಿಸಿ ಮಾತನಾಡಿದ ಅವರು, ಬಿ.ಜೆ.ಪಿ ಸರಕಾರದ ಮಂತ್ರಿಗಳು ಮತ್ತು ಕೆ.ಜೆ.ಪಿ ಮುಖಂಡರು ಅಧಿಕಾರಕ್ಕಾಗಿ ಕಚ್ಚಾಡುತ್ತಿದ್ದರಿಂದ ಅಭಿವೃಧ್ಧಿ ಸಂಪೂರ್ಣವಾಗಿ ಕುಂಠಿತಗೊಂಡಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಬಿಜೆಪಿ, ಆರ್.ಎಸ್.ಎಸ್ ಕೈಗೊಂಬೆಯಾಗಿದ್ದು ಜೆಡಿಎಸ್ ಪಕ್ಷದಲ್ಲಿ ಕುಟುಂಬ ರಾಜಕಾರಣದ ಜೊತೆಗೆ ಜಾತಿ ರಾಜಕಾರಣಕ್ಕೆ ಪ್ರೋತ್ಸಾಹ ನೀಡುತ್ತಿದ್ದು ಕಾಂಗ್ರೆಸ್ ಮಾತ್ರ ಎಲ್ಲಾ ಸಮಾಜದವರಿಗೆ ಸಾಮಾಜಿಕ ನ್ಯಾಯ ಕಲ್ಪಿಸುತ್ತಿದ್ದು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರ ಬರುವುದು ನಿಶ್ಚಿತವೆಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು.
ವಿಶೇಷ ಘಟಕ ಯೋಜನೆಯಡಿ ಜಿಕೆವಿಕೆ ಮೂಲಕ ಕುರಿಗಳನ್ನು ಶಾಸಕರು ವಿತರಿಸಿ ಸದುಪಯೋಗ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗಬೇಕೆಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುನಿಕೃಷ್ಣಪ್ಪ, ಜಿಪಂ ಮಾಜಿ ಅಧ್ಯಕ್ಷ ವಿ. ಸುಬ್ರಮಣಿ, ತಾ.ಪಂ. ಅಧ್ಯಕ್ಷ ಯರ್ರಬಚ್ಚಪ್ಪ, ಸದಸ್ಯ ದಿಬ್ಬೂರಹಳ್ಳಿ ರಾಜಣ್ಣ, ನೇಕಾರರ ರತ್ನ ಪ್ರಶಸ್ತಿ ಪುರಸ್ಕೃತ ಬಿ.ಜೆ.ಗಣೇಶ್, ಜಿ.ಕೆ.ವಿ.ಕೆ ವಿಜ್ಞಾನಿಗಳಾದ ನಾಗರಾಜ್, ಮಧುಕಿರಣ್, ನಟರಾಜ್, ವೆಂಕಟರೆಡ್ಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.