ಕೋಲಾರ

ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ: ಸಂಪಂಗಿ

Published On :

ಕೆಜಿಎಫ್:  ಕ್ಷೇತ್ರದ ಗಡಿಭಾಗದ ರಸ್ತೆಗಳು ತೀರಾ ಹದೆಗೆಟ್ಟಿದ್ದು, ಈ ಹಿಂದೆ ಆಡಳಿತ ನಡೆಸಿದ ವಿವಿಧ ರಾಜಕೀಯ ಪಕ್ಷಗಳು ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿಪಡಿಸಲು ವಿಫಲರಾಗಿದ್ದಾರೆ. ತಾವು ಶಾಸಕರಾದ ನಂತರ ನಗರ ಹಾಗೂ ಗ್ರಾಮಾಂತರ ಭಾಗದ ಗಡಿ ಪ್ರದೇಶಗಳ ರಸ್ತೆಗಳು ಹಾಗೂ ಇತರೇ ಮೂಲ ಸೌಕರ್ಯಗಳಿಗೆ ಹೆಚ್ಚು ಆದ್ಯತೆ ನೀಡಿದ್ದೇನೆ ಎಂದು ಶಾಸಕ ವೈ.ಸಂಪಂಗಿ ಹೇಳಿದರು.
ಇಲ್ಲಿನ ಮಾರಿಕುಪ್ಪಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಬಂಪಲ್ಲಿಯಿಂದ ದಾಯಾಮಾನ ಗುಡಿಸಲು ಸಂಪರ್ಕಿಸುವ ರಸ್ತೆಗೆ ಸುಮಾರು 28 ಲಕ್ಷ ವೆಚ್ಚದಲ್ಲಿ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಕಂಬಂಪಲ್ಲಿಯಿಂದ ದಾಯಾಮಾನ ಗುಡಿಸಲು ಸಂಪರ್ಕಿಸುವ ಸುಮಾರು 1.5 ಕಿ.ಮೀ.ವರೆಗೆ ಡಾಂಬರೀಕರಣ ಕಾಮಗಾರಿಯಿಂದ ಮಾರಿಕುಪ್ಪಂ ಗ್ರಾಪಂ ವ್ಯಾಪ್ತಿಗೆ ಸೇರುವ ಇತರೇ ಗ್ರಾಮಸ್ಥರು, ರೈತರು, ವಿದ್ಯಾರ್ಥಿಗಳು ಹಾಗೂ ವಾಹನ ಚಾಲಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಈ ವೇಳೆ ಬಂಗಾರಪೇಟೆ ಎಪಿಎಂಸಿ ಅಧ್ಯಕ್ಷ ವಿಜಯಶಂಕರ್, ಸದಸ್ಯ ದಶರಥರೆಡ್ಡಿ, ಮುಖಂಡರಾದ ಮುನಿಸ್ವಾಮಿರೆಡ್ಡಿ, ಜಯರಾಮರೆಡ್ಡಿ, ಮಾರಿಕುಪ್ಪಂ ಗ್ರಾಪಂ ಸದಸ್ಯ ವೆಂಕಟರಾಮ್, ಅಬ್ದುಲ್ ಮಾಲೀಕ್, ಮಾಜಿ ಅಧ್ಯಕ್ಷ ಸುಬ್ರಮಣಿ ಸೇರಿದಂತೆ ಇತರೇ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.