ಪುರಸಭೆ ಚುನಾವಣೆ: 14 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಬಂಗಾರಪೇಟೆ: ಮುಂದಿನ ತಿಂಗಳು 7ರಂದು ನಡೆಯಲಿರುವ ಪುರಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಬುಧವಾರ ವಿವಿಧ ವಾರ್ಡುಗಳಿಗೆ14 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ವಾರ್ಡ್ ನಂ 1ರಲ್ಲಿ ಅಬ್ನುರಾಜ್ ಕಾಂಗ್ರೆಸ್ ಅಭ್ಯರ್ಥಿಯಾಗಿ, ವಾರ್ಡ್ 2ರಲ್ಲಿ ಶೇಖಖೌ ಮೌಲಾ ಪಕ್ಷೇತರ ಅಭ್ಯರ್ಥಿಯಾಗಿ, 4ರಲ್ಲಿ ನವೀನ್ರಾಜ್, ಜೆಡಿಎಸ್, ಮಂಜುಳಾ ಕೆಜೆಪಿ, 13ರಲ್ಲಿ ಶ್ಯಾಮಲ ಜೆಡಿಎಸ್, ಗಂಗಮ್ಮ ಕಾಂಗ್ರೆಸ್, 19ರಲ್ಲಿ ವಿಜಯ ಪಕ್ಷೇತರ, ಸುಗೇಂದ್ರ ಪಕ್ಷೇತರ, ರಮೇಶ್ ಬಿಜೆಪಿ, 20ರಲ್ಲಿ ಕುಮಾರ್, ಜಿಡಿಎಸ್, 22ರಲ್ಲಿ ವೇಲುಮುರುಗನ್ ಜೆಡಿಎಸ್, 16ರಲ್ಲಿ ಹೇಮಂತ್ಕುಮಾರ್ ಪಕ್ಷೇತರ,17ರಲ್ಲಿ ರಘುನಾಥಶೆಟ್ಟಿ ಮತ್ತು 18ನೇ ವಾರ್ಡಿನಲ್ಲಿ ಭಾಗ್ಯಲಕ್ಷ್ಮೀ ಜೆಡಿಎಸ್ನಿಂದ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಜನರ ವಿಶ್ವಾಸ ಗಳಿಸುವಲ್ಲಿ ಕಾಂಗ್ರೆಸ್, ಬಿಜೆಪಿ ವಿಫಲ:
ಬಂಗಾರಪೇಟೆ: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಜನರ ವಿಶ್ವಾಸ ಗಳಿಸುವಲ್ಲಿ ಸಂಪೂರ್ಣ ಎಡವಿದ್ದು ಮುಂದಿನ ಸಾರ್ವತ್ರಿಕ ಚುನಾವಣೆಗಳಲ್ಲಿ ಪ್ರಾದೇಶಿಕ ಪಕ್ಷಗಳು ರಾಜ್ಯದಲ್ಲಿ ಮೇಲು ಕೈ ಸಾಧಿಸಲಿದೆ ಎಂದು ಬಿಎಸ್ಆರ್ ಕಾಂಗ್ರೆಸ್ ಎಸ್ಸಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಜಿಗಿನಿ ಶಂಕರೆ ಹೇಳಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜಿಲ್ಲೆಯ ವೀಕ್ಷಕರಾಗಿ ನೇಮಕವಾಗಿರುವ ಜಿಗಿನಿ ಶಂಕರ್ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಅಭಿವೃದ್ಧಿ ಮಂತ್ರದೊಂದಿಗೆ ಅಧಿಕಾರಕ್ಕೆ ಬಂದು ರಾಜ್ಯವನ್ನು ಲೂಟಿ ಮಾಡಿ ಸಾಲಾಗಿ ಜೈಲು ಸೇರುವ ಮೂಲಕ ಇತಿಹಾಸ ಮಾಡಿದೆ. ವಿರೋಧಿ ಪಕ್ಷ ಕಾಂಗ್ರೆಸ್ ತನ್ನ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ವಿಫಲವಾಗಿದೆ. ರಾಷ್ಟ್ರೀಯ ಪಕ್ಷಗಳಿಂದ ಯಾವುದೇ ಪ್ರಯೋಜನವಿಲ್ಲ ಎಂದು ಜನರು ಈ ಬಾರಿ ಪ್ರಾದೇಶಿಕ ಪಕ್ಷಕ್ಕೆ ತಮ್ಮ ಬೆಂಬಲ ನೀಡುವರು ಈಗಾಗಲೇ ಶ್ರೀರಾಮುಲು ನೇತೃತ್ವದ ಬಿಎಸ್ಆರ್ ಕಾಂಗ್ರೆಸ್ ಮಾಡಿರುವ ಯಾತ್ರೆಗೆ ಜನರಿಂದ ಅಭೂತಪೂರ್ವ ಬೆಂಬಲ ದೊರೆತಿರುವುದೇ ಸಾಕ್ಷಿ ಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬುದಕ್ಕೆ. ಸ್ಥಳೀಯ ಸಂಸ್ಥೆ ಚುನಾವಣೆಗಳು ಮುಂದಿನ ಚುನಾವಣೆಯ ದಿಕ್ಸೂಚಿಯಾಗುವುದರಿಂದ ಪಕ್ಷ ಜಿಲ್ಲೆಯ ಎಲ್ಲಾ 166 ಸ್ಥಾನಗಳಲ್ಲಿಯೂ ತನ್ನ ಅಭ್ಯರ್ಥಿಗಳನ್ನು ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳದೆ ಕಣಕ್ಕಿಳಿಸಲಿದೆ ಎಂದರು ಗುರುವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಎಂದರು. ಪಕ್ಷದ ಜಿಲ್ಲಾಧ್ಯಕ್ಷ ಎಂ.ಎಸ್. ಆನಂದ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪಲತಾ, ಅಂಗವಿಕಲ ಸಂಘದ ಅಧ್ಯಕ್ಷ ಮಂಜುನಾಥರೆಡ್ಡಿ, ರಾಜಣ್ಣ, ಮುಖಂಡ ರವಿಕುಮಾರ್, ಉಷಾ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

