ಕಾವೇರಿ ನೀರು ಹಂಚಿಕೆ ವಿವಾದ: ರಾಜ್ಯಕ್ಕೆ ಅನ್ಯಾಯವಾಗದಿರಲಿ
ಕೋಲಾರ: ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆಯಲ್ಲಿ ಮಿತ್ರ ಪಕ್ಷಗಳ ಋಣಕ್ಕೆ ಬಿದ್ದು ಕೇಂದ್ರ ಸರ್ಕಾರವು ರಾಜ್ಯಕ್ಕೆ ಅನ್ಯಾಯ ಮಾಡದಂತೆ ನಿಗಾ ವಹಿಸಲು ಕೋರಿ ರಾಷ್ಟ್ರಪತಿಗಳಿಗೆ ಭ್ರಷ್ಟಾಚಾರ ವಿರೋಧಿ ಹೋರಾಟ ವೇದಿಕೆಯ ಕಾರ್ಯಕರ್ತರು ಗುರುವಾರ ಅಪರ ಜಿಲ್ಲಾಧಿಕಾರಿ ಪೆದ್ದಪ್ಪಯ್ಯ ಮೂಲಕ ಮನವಿ ಸಲ್ಲಿಸಿದರು.
ಐತೀರ್ಪನ್ನು ಪ್ರಶ್ನಿಸುವ ರಾಜ್ಯಗಳ ಹಕ್ಕು ಮತ್ತು ಈಗ ವಿಚಾರಣೆಗೆ ಇರುವ ತಕರಾರು ಅರ್ಜಿಗಳ ಇತ್ಯರ್ಥಕ್ಕೆ ಅಧಿಸೂಚನೆ ಅಡ್ಡಿಯಾಗುವುದಿಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ.
ಕಾವೇರಿ ಜಲ ನಿರ್ವಹಣಾ ಮಂಡಳಿಯು ಕೇಂದ್ರ ಸರ್ಕಾರದ ನೇರ ನಿಯಂತ್ರಣಕ್ಕೆ ಒಳಪಡುವ ಸ್ವಾಯತ್ತ ಸಂಸ್ಥೆಯಾಗಿರುವುದರಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಗಲಿದೆ ಎಂಬ ಆತಂಕಕ್ಕೆ ಕಾರಣವಿಲ್ಲ. ಆದರೂ ಮಿತ್ರಪಕ್ಷಗಳ ವಶೀಲಿಬಾಜಿಗೆ ಕೇಂದ್ರ ಸರ್ಕಾರವು ಮಣೆ ಹಾಕಿ ನಿರ್ವಹಣಾ ಮಂಡಳಿ ರಚನೆಯಲ್ಲಿ ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಬಾರದು ಎಂದು ಅವರು ಒತ್ತಾಯಿಸಿದರು.
ಈ ಸಂದರ್ಭ ವಕೀಲ ಹಾಗೂ ಭ್ರಷ್ಟಾಚಾರ ವಿರೋಧಿ ಹೋರಾಟ ವೇದಿಕೆ ರಾಜ್ಯಾಧ್ಯಕ್ಷ ಕೆ.ನರೇಂದ್ರಬಾಬು, ಟಿ.ಎಂ. ಶಿವಣ್ಣ, ಟಿ.ಜಿ. ಮನ್ಮಥರೆಡ್ಡಿ, ಸುರೇಂದ್ರಕುಮಾರ್, ಕೆ.ಸುಮನ್, ಸೋಮಶೇಖರ್, ಟಿ.ಶ್ರೀನಿವಾಸ್, ಬಿ.ಆರ್.ಲೋಕೇಶ್, ಎಸ್.ರಾಜಶೇಖರ್, ವಿಜಯಕುಮಾರ್, ಎ.ವಿ.ಆನಂದ್, ವೆಂಕಟೇಶಪ್ಪ, ಆರ್.ವಿ.ನಾರಾಯಣಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

