ಪಟ್ಟನಾಯಕನಹಳ್ಳಿಯಲ್ಲಿ ಪ್ರಥಮ ದರ್ಜೆ ಕಾಲೇಜು
ಶಿರಾ: ಮುಂದಿನ ವರ್ಷ ಪಟ್ಟನಾಯಕನಹಳ್ಳಿಯಲ್ಲಿ ಪ್ರಥಮ ದರ್ಜೆ ಕಾಲೇಜು ಆರಂಭವಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಟಿ.ಬಿ.ಜಯಚಂದ್ರ ತಿಳಿಸಿದರು.
ಅವರು ತಾಲೂಕಿನ ಪಟ್ಟನಾಯಕನಹಳ್ಳಿಯ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕ್ರೀಡೆ, ಸಾಂಸ್ಕೃತಿಕ ಹಾಗೂ ಎನ್ಎಸ್ಎಸ್ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದರು.
ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಇಲ್ಲದೇ ಹೊದರೆ ಯಶಸ್ಸು ಮರೀಚಿಕೆಯಾಗುತ್ತದೆ. ಮುಂದಿನ ಭವಿಷ್ಯ ಉಜ್ವಲವಾಗಬೇಕೆಂಬ ಕನಸು ಇದ್ದರೆ ಮಾತ್ರ ನಮ್ಮ ಬದುಕು ಸುಂದರವಾಗುತ್ತದೆ. ಇಲ್ಲದೆ ಹೋದರೆ ಸೂತ್ರವಿಲ್ಲದ ಗಾಳಿಪಟವಾಗುತ್ತದೆ ಎಂದರು.
ನನ್ನ 40 ವರ್ಷಗಳ ರಾಜಕೀಯ ಜೀವನದ ಬಗ್ಗೆ ಆತ್ಮ ಕಥೆ ಬರೆಯುತ್ತಿದ್ದು, ತಾಲೂಕಿನ ಹಲವರ ವ್ಯಕ್ತಿ ಚಿತ್ರಣವನ್ನು ದಾಖಲಿಸಿ ಅವರ ಇನ್ನೊಂದು ಮುಖ ತಿಳಿಯುವಂತಾಗಬೇಕು. ಆಗ ಮಾತ್ರ ನನ್ನ ಹೋರಾಟದ ಬದುಕಿಗೆ ಅರ್ಥ ಬರುವುದು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಸಿ.ಡಿ.ಸಿ. ಉಪಾಧ್ಯಕ್ಷ ಎನ್.ಸಿ.ದೊಡ್ಡಯ್ಯ ವಹಿಸಿದ್ದರು. ಪ್ರಾಚಾರ್ಯ ಬಿ.ಪಿ.ಪಾಂಡುರಂಗಯ್ಯ ಪ್ರಾಸ್ತವಿಕ ಮಾತುಗಳನ್ನಾಡಿದರು.
ಮಾಜಿ ಶಾಸಕ ಎಸ್.ಕೆ. ದಾಸಪ್ಪ, ಜಿ.ಪಂ. ಸದಸ್ಯ ಅರೇಹಳ್ಳಿ ರಮೇಶ್, ಎ.ಪಿ.ಎಂ.ಸಿ. ಅಧ್ಯಕ್ಷ ಶಶಿಧರ ಗೌಡ, ಪ್ರಾಚಾರ್ಯ ಪಿ.ಎಚ್. ಮಹೇಂದ್ರಪ್ಪ, ಪರಮೇಶಗೌಡ, ಉಪ ಪ್ರಾಂಶುಪಾಲ ಈಶ್ವರಯ್ಯ, ಹೆಂದೊರೆ ಗ್ರಾ.ಪಂ. ಅಧ್ಯಕ್ಷ ಪದ್ಮನಾಭ್, ಹೊಸಳ್ಳಿ ಗ್ರಾ.ಪಂ. ಅಧ್ಯಕ್ಷ ಹೊಸಮನೆ ರಂಗನಾಥ್, ನಾದೂರು ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಕ್ಕ, ಬರಗೂರು ನಟರಾಜ್, ಸೇರಿದಂತೆ ಹಲವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

