ಮತದಾರರ ಪಟ್ಟಿ ಲೋಪ: ಸಾರ್ವಜನಿಕರ ಪ್ರತಿಭಟನೆ
ಕೋಲಾರ: ನಗರಸಭೆಯ 33ನೇ ವಾರ್ಡಿಗೆ ಸೇರಿದ ರಹಮತ್ನ್‌ಗರದ ಪಶ್ಚಿಮ ಭಾಗ ಮತ್ತು ರಾಜಾ ನಗರದಲ್ಲಿ ಸುಮಾರು 500 ಮಂದಿಯ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಕೈಬಿಡಲಾಗಿದೆ ಎಂದು ಆರೋಪಿಸಿ ಈ ವಾರ್ಡಿನ ನಾಗರಿಕರು ಪ್ರತಿಭಟನೆ ನಡೆಸಿದರು.
33ನೇ ವಾರ್ಡಿನ ಸೈಯದ್ ಇಸಾಕ್ ಬರೀದ್ ಹಾಗೂ ಬಾಬು ಎಂಬುವರ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ ನಾಗರಿಕರು ರಾಜಕೀಯ ಒತ್ತಡಗಳಿಗೆ ಮಣಿದು ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ನೂರಾರು ಮತದಾರರ ಹೆಸರನ್ನು ಮಟದಾರರ ಪಟ್ಟಿಯಿಂದ ತಪ್ಪಿಸಿದ್ದಾರೆಂದು ಗುರುತಿನ ಚೀಟಿಗಳನ್ನು ಪ್ರದರ್ಶಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
33ನೇ ವಾರ್ಡಿನ 97 ಮತ್ತು 98ನೇ ಮತಗಟ್ಟೆಯಲ್ಲಿ 1650 ಮಂದಿ ಮತ ಚಲಾಯಿಸಲು ಅವಕಾಶವಿತ್ತು, 2007ರ ಚುನಾವಣೆಯಲ್ಲಿ ಗುರುತಿನ ಚೀಟಿ ಹೊಂದಿರುವ ಈ ಎಲ್ಲ ಪತ್ರದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಆದರೆ, ಪ್ರಸ್ತುತ ಮತದಾರರ ಪಟ್ಟಿಯಲ್ಲಿ 1059 ಜನರ ಹೆಸರು ಮಾತ್ರ ಇರುವುದರಿಂದ ಲೋಪ ಸರಿಪಡಿಸಿ ಚುನಾವಣೆ ನಡೆಸಬೇಕು, ಇಲ್ಲವೇ ಸದರಿ ವಾರ್ಡಿನ ಚುನಾವಣೆ ಮುಂದೂಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಪೆದ್ದದ್ದಯ್ಯನವರು ವಾರ್ಡಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ, ಮತದಾರರ ಪಟ್ಟಿಯಲ್ಲಿ ಏನಾದರೂ ಲೋಪಗಳು ಇದಲ್ಲಿ ಸರಿಪಡಿಲಾಗುತ್ತದೆ ಎಂದು ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

