ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ
ಬಂಗಾರಪೇಟೆ: ಹೈದರಾಬಾದ್ನಲ್ಲಿ ಸಂಭವಿಸಿದ ಅವಳಿ ಬಾಂಬ್ ಸ್ಫೋಟದಲ್ಲಿ 16ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಪೊಲೀಸರು ಎಲ್ಲಿಯೂ ಘಟನೆ ಮರುಕಳಿಸದಂತೆ ಜನದಟ್ಟನೆ ಅಧಿಕವಾಗಿರುವ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸುತ್ತಿದ್ದಾರೆ.
ಭಾನುವಾರ ರಾತ್ರಿಯಿಂದ ಕೆಜಿಎಫ್ ಪೊಲೀಸರು ಸರ್ಕಾರದ ಸೂಚನೆ ಮೇರೆಗೆ ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ರೈಲಿನಲ್ಲಿ ಬಂದು ಹೋಗುವವರನ್ನು ಹಾಗೂ ಹೊರಗಡೆಯಿಂದ ರೈಲಿಗೆ ಹೋಗುವವರನ್ನು ಬಾಂಬ್ ನಿಷ್ಕ್ರಿಯ ದಳ ತೀವ್ರವಾಗಿ ತಪಾಸಣೆ ಮಾಡುತ್ತಿದ್ದಾರೆ. ಎರಡು ದಿನಗಳಿಂದ ತಪಾಸಣೆ ಮಾಡುತ್ತಿರುವುದರಿಂದ ಪ್ರಯಾಣಿಕರಲ್ಲಿ ಭೀತಿ ಉಂಟಾಗಿದೆ. ರೈಲಿನಲ್ಲಿ ಬಾಂಬ್ ಇಡಲಾಗಿದೇ ಇಲ್ಲದಿದ್ದರೆ ಏಕೆ ತಪಾಸಣೆ ಮಾಡಲಾಗುತ್ತಿದೆ ಎಂಬ ಪ್ರಶ್ನೆ ಕಾಡುತ್ತಿದೆ. ಕಳೆದ ಕೆಲ ತಿಂಗಳ ಹಿಂದೆ ಸಂಘಮಿತ್ರ ಎಕ್ಸ್ಪ್ರೆಸೆ ರೈಲಿನಲ್ಲಿ ಬಾಂಬ್ ಇಡಲಾಗಿದೆ ಎಂಬ ಮಾಹಿತಿಯಿಂದ ಪಾಟ್ನದಿಂದ ಬೆಂಗಳೂರುವರೆಗೂ ಪೊಲೀಸರು ತಪಾಸಣೆ ಮಾಡಿದ್ದರು. ಮತ್ತೆ ಅಂತಹ ಸುದ್ದಿ ಹರಡಿದೆಯೇ ಎಂಬ ಅನುಮಾನ ಪ್ರಯಾಣಿಕರನ್ನು ಕಾಡಿತು.
ನಮಗೆ ಹೈಕಮಾಂಡ್ನಿಂದ ತಪಾಸಣೆ ಮಾಡುವಂತೆ ಆದೇಶ ಬಂದಿದ್ದು ನಿಲ್ಲಿಸುವಂತೆ ಸೂಚನೆ ಬರುವವರೆಗೂ ತಪಾಸಣೆ ಮುಂದುವರೆಸಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

