ಮೂಲೆ ಸೇರಿರುವ ವೃದ್ಧಾಪ್ಯ ವೇತನ ಅರ್ಜಿ!
ಕೋಲಾರ: ಮುಳಬಾಗಿಲು ತಾಲೂಕು ಕಚೇರಿಗೆ ಸರ್ಕಾರದ ಸವಲತ್ತುಗಳನ್ನು ಕೋರಿ ಬಡಜನರು ಸಲ್ಲಿಸಿರುವ ಅರ್ಜಿಗಳು ವಿಲೇವಾರಿಯಾಗದೆ ಮೂಲೆ ಸೇರಿರುವುದನ್ನು ಬೆಳಕಿಗೆ ತಂದಿರುವ ರೈತ ಸಂಘದ ಕಾರ್ಯಕರ್ತರು, ಕೂಡಲೇ ಅರ್ಜಿಗಳನ್ನು ವಿಲೇವಾರಿ ಮಾಡಿ ಬಡವರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವಂತೆ ಒತ್ತಾಯಿಸಿದ್ದಾರೆ. ರೈತ ಸಂಘದ ಕಾರ್ಯಕರ್ತರು ಸೋಮವಾರ ಮುಳಬಾಗಿಲು ತಾಲೂಕು ಕಚೇರಿಗೆ ಭೇಟಿ ನೀಡಿದಾಗ ಸಂದ್ಯಾ ಸುರಕ್ಷಾ, ವೃದ್ಧಾಪ್ಯ ವೇತನ ಹಾಗೂ ಅಂಗವಿಕಲರ ಪಿಂಚಣಿಗಾಗಿ ಬಡವರು ಸಲ್ಲಿಸಿರುವ ಅರ್ಜಿ ರೈತರ ಅರ್ಜಿಗಳು ತಾಲೂಕು ಕಚೇರಿಯಲ್ಲಿ ಮೂಲೆ ಸೇರಿರುವುದನ್ನು ಗಮನಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿವಿಧ ಪಿಂಚಣಿಗಳಿಗಾಗಿ ಗ್ರಾಮೀಣ ಪ್ರದೇಶದ ಬಡವರು ಸಲ್ಲಿಸಿರುವ ಅರ್ಜಿಗಳನ್ನು ಸರ್ಕಾರಕ್ಕೆ ಕಳುಹಿಸಿ ಅನುಕೂಲ ಮಾಡುವ ಬದಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆಂದು ರೈತ ಮುಖಂಡರು ತಹಸೀಲ್ದಾರ್ ಗಮನಕ್ಕೆ ತಂದಾಗ ಸ್ಥಳಕ್ಕೆ ಬಂದ ತಹಸೀಲ್ದಾರ್ ರಾಮಮೂರ್ತಿ ಅವರು ಸಂಬಂಧಪಟ್ಟ ವಿಭಾಗದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು ತಕ್ಷಣ ಈ ಅರ್ಜಿಗಳನ್ನು ಸರ್ಕಾರಕ್ಕೆ ಕಳುಹಿಸಿ ಬಡವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವೆ ಎಂದು ಭರವಸೆ ನೀಡಿದರು. ರೈತ ಸಂಘದ ಜಿಲ್ಲಾಧ್ಯಕ್ಷ ನಾರಾಯಣಗೌಡ, ವಿದ್ಯಾರ್ಥಿ ಮುಖಂಡ ರಂಜಿತ್ಕುಮಾರ್, ಗೂಕುಂಟೆ ಕೃಷ್ಣ, ರಂಜಿತ್, ವಿಕ್ರಮ್, ಮುನೇಗೌಡ, ಮುನಿಸ್ವಾಮಿಗೌಡ, ಜಿಲ್ಲಾ ಸಂಘಟನಾ ಸಂಚಾಲಕ ಶ್ರೀನಿವಾಸಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

