ಕೋಲಾರ

3ರಂದು ಚಿಂತಾಮಣಿಗೆ ಎಚ್‌ಡಿಕೆ

Published On :

ಚಿಂತಾಮಣಿ:  ಜೆಡಿಎಸ್‌ನ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮಾ.3ರಂದು ಬೆಳಗ್ಗೆ 11 ಗಂಟೆಗೆ ಚಿಂತಾಮಣಿ ನಗರಕ್ಕೆ ಆಗಮಿಸಲಿದ್ದಾರೆ ಎಂದು ಜೆಡಿಎಸ್‌ನ ಸಂಘಟನಾ ಯುವ ಮುಖಂಡ ಮಸಲಹಳ್ಳಿ ಮಂಜುನಾಥ್ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜೆಡಿಎಸ್ ಪಕ್ಷದಲ್ಲಿ ಸ್ಥಳೀಯ ಮುಖಂಡರ ಭಿನ್ನಾಭಿಪ್ರಾಯ ಹಾಗೂ ಗೊಂದಲ ನಿವಾರಿಸಿ, ಪಕ್ಷ ಸಂಘಟನೆ ಹಾಗೂ ಸ್ಥಳೀಯ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರಲ್ಲಿ ಚೈತನ್ಯ ತುಂಬಲು ಆಗಮಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಚಿಂತಾಮಣಿ-ಬಾಗೇಪಲ್ಲಿ ರಸ್ತೆಯ ನಾಯನಹಳ್ಳಿ ಬಳಿ ಹೆಲಿಕ್ಯಾಪ್ಟರ್‌ನಲ್ಲಿ ಆಗಮಿಸುವ ಅವರನ್ನು ಮೆರವಣಿಗೆ ಮೂಲಕ ಸ್ವಾಗತಿಸಲಾಗುವುದು ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.