ನ್ಯಾಯಬೆಲೆ ಅಂಗಡಿ ನಿರ್ವಹಣೆ ಸ್ತ್ರೀಶಕ್ತಿಗೆ ನೀಡಬೇಡಿ: ಆಗ್ರಹ
ಕೋಲಾರ: ಕೇಂದ್ರ ಸರ್ಕಾರ ನ್ಯಾಯಬೆಲೆ ಅಂಗಡಿಗಳ ನಿರ್ವಹಣೆಯನ್ನು ಸ್ತ್ರೀ ಶಕ್ತಿ ಸಂಘಗಳಿಗೆ ನೀಡಲು ನಿರ್ಧರಿಸಿರುವುದನ್ನು ವಿರೋಧಿಸಿ ಗುರುವಾರ ನಗರದಲ್ಲಿ ಜಿಲ್ಲಾ ಪಡಿತರ ವಿತರಕರ ಸಂಘ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಪ್ರವಾಸಿ ಮಂದಿರದಿಂದ ಬೈಕ್ ರ್ಯಾಲಿ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.
ಎಲ್ಲ ವರ್ಗದ ಪಡಿತರ ಚೀಟಿಗಳಿಗೆ ಏಕರೂಪದಲ್ಲಿ ಪಡಿತರ ಪದಾರ್ಥಗಳನ್ನು ವಿತರಿಸಬೇಕು. ಪಡಿತರ ಪದಾರ್ಥಗಳ ಜತೆಗೆ ರೇಲ್ವೆ ಟಿಕೆಟ್, ಅಂಚೆ ಚೀಟಿ, ಮೊಬೈಲ್ ಕರೆನ್ಸಿ, ಅಡುಗೆ ಅನಿಲ ಹಾಗೂ ಮತ್ತಿತರೆ ಅವಶ್ಯಕ ಪದಾರ್ಥಗಳನ್ನು ಮಾರಾಟ ಮಾಡಲು ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.
ಹಲವು ವರ್ಷಗಳಿಂದ ನ್ಯಾಯಬೆಲೆ ಅಂಗಡಿ ಹಾಗೂ ಸೀಮೆಎಣ್ಣೆ ಪರವಾನಗಿದಾರರಾಗಿ ಕೆಲಸ ನಿರ್ವಹಿಸುತ್ತಿರುವ ನಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಸರ್ಕಾರದಿಂದಲೇ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು.
ವಿತರಕರ ಸಂಘದ ಅಧ್ಯಕ್ಷ ಎನ್. ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಬಿ.ಸುಬ್ರಮಣ್ಯೇಗೌಡ, ಗೌರವಾಧ್ಯಕ್ಷ ವೆಂಕಟರಾಮರೆಡ್ಡಿ, ಉಪಾಧ್ಯಕ್ಷ ರಮೇಶ್ ಬಾಬು, ಎಸ್.ವಿ. ಶಂಕರ್, ರಮೇಶ್ ಪ್ರತಿಭಟನೆಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

