ಕೋಲಾರ: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ- 4ರ ಟಮಕ ಬಳಿ ಬುಧವಾರ ನಡೆದಿದೆ.
ಟಮಕ ಬಳಿ ದ್ವಿಚಕ್ರ ವಾಹನ ಸವಾರ ಸರ್ವಿಸ್ ರಸ್ತೆಯಿಂದ ಗದ್ದೆಕಣ್ಣೂರು ಕಡೆ ಹೋಗಲು ರಾಷ್ಟ್ರೀಯ ಹೆದ್ದಾರಿ ಕ್ರಾಸ್ ಮಾಡುತ್ತಿದ್ದಾಗ ಚೆನ್ನೈ ಕಡೆಯಿಂದ ಬಂದ ಕಾರು ಚಾಲಕ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ವಾಹನ ಸವಾರ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸತ್ತ ವ್ಯಕ್ತಿಯ ವಿವರ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.