ಕಾಟಾಚಾರದ ಕಾರ್ಯಕ್ರಮ
ಶಿಡ್ಲಘಟ್ಟ: ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ತಾಲೂಕು ಆಡಳಿತ ಪಟ್ಟಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರ ದಿನಾಚರಣೆ ಕಾರ್ಯಕ್ರಮವು ಕಾಟಾಚಾರಕ್ಕೆ ನಡೆಯಿತು.
ಸಂವಿಧಾನತ್ಮಕವಾಗಿ ಮತದಾರರ ಹಕ್ಕುಗಳು ಮತ್ತು ವ್ಯವಸ್ಥೆಯ ಕುರಿತು ಜನಜಾಗೃತಿ ಮೂಡಿಸಬೇಕಾದ ಕಾರ್ಯಕ್ರಮದಲ್ಲಿ ಬಹುತೇಕ ಬಿಎಲ್ಓಗಳು ಮಾತ್ರ ಭಾಗವಹಿಸಿ ಬೆರಳೆಣಿಕೆಯ ಪ್ರಮಾಣದಲ್ಲಿ ನಾಗರಿಕರು ಭಾಗವಹಿಸಿದ್ದರು. ಇದರಿಂದ ಕಾರ್ಯಕ್ರಮ ಕಾಟಾಚಾರಕ್ಕೆ ನಡೆದಿದ್ದು ಸ್ಪಷ್ಟವಾಗಿ ಕಂಡು ಬಂದಿತು.
ಕಾರ್ಯಕ್ರಮದಲ್ಲಿ ವಿವಿಧ ಪಕ್ಷಗಳ ತಾಲೂಕು ಮಟ್ಟದ ಮುಖಂಡರು ಸಹ ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಅಧಿಕಾರಿಗಳು ಸಹ ಇರಲಿಲ್ಲ. ಇದರಿಂದ ತಾಲೂಕು ಆಡಳಿತ ಈ ಕಾರ್ಯಕ್ರಮಕ್ಕೆ ವ್ಯಾಪಕ ಪ್ರಚಾರ ನೀಡುವುದರಲ್ಲಿ ವಿಫಲವಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಕಾರ್ಯಕ್ರಮದಲ್ಲಿ ಅನುಭವಿ ಬಿಎಲ್ಓಗಳು ಮಾತ್ರ ಮತದಾನದ ಹಕ್ಕುಗಳು ಕುರಿತು ಜಾಗೃತಿ ಮೂಡಿಸಿದರು. ಸಾಂಕೇತಿಕವಾಗಿ ಭಾರತ ಚುನಾವಣಾ ಆಯೋಗದ ಮೂಲಕ ನೀಡಿರುವ ಗುರುತಿನ ಚೀಟಿಯನ್ನು ತಹಸೀಲ್ದಾರ್ ವಿತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

