ನಿರಂತರ ಅಧ್ಯಯನದಿಂದ ಜ್ಞಾನ ವೃದ್ಧಿ: ಡಾ. ಉಷಾದೇವಿ
ಮಾಲೂರು: ಶ್ರದ್ಧೆ, ಸಂಯಮ, ಸಮಯ ಪ್ರಜ್ಞೆ, ಸತತ ಅಧ್ಯಯನ ಇದ್ದರೆ ಪ್ರತಿಯೊಬ್ಬರು ಜ್ಞಾನ ಪಡೆಯಲು ಸಾಧ್ಯ ಎಂದು ಬೆಂಗಳೂರು ವಿವಿ ಪ್ರಾಧ್ಯಾಪಕಿ ಡಾ.ಉಷಾದೇವಿ ಕಿವಿಮಾತು ಹೇಳಿದ್ದಾರೆ.
ಇಲ್ಲಿನ ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಬೆಂಗಳೂರು ವಿವಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಸಾರ್ವತ್ರಿಕವಾಗಿರುವುದರಿಂದ ಶಿಕ್ಷಣವನ್ನು ಯಾರು ಬೇಕಾದರೂ ಪಡೆದುಕೊಳ್ಳುವ ವ್ಯವಸ್ಥೆ ಇದೆ ಎಂದರು. ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ರ್ಯಾಂಕ್ ಪಡೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಅಶ್ವಥ್ರೆಡ್ಡಿ ಮಾತನಾಡಿ, ಜಾಗತಿಕ ಸವಾಲು ಎದುರಿಸಲು ಶಿಕ್ಷಣ ಬಹಳ ಮಹತ್ತರ ಪಾತ್ರ ವಹಿಸುವುದರಿಂದ ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ಬೆಂಗಳೂರು ವಿವಿಯಲ್ಲಿ 8ನೇ ರ್ಯಾಂಕ್ ಪಡೆದ ಪುಷ್ಪಾ, ಎಂಎ ಸ್ನಾತಕೋತರ ತರಗತಿಯಲ್ಲಿ ಸ್ವರ್ಣ ಪದಕ ಪಡೆದ ಮಂಜುನಾಥ್, ಮಂಜುಳ ಹಾಗೂ ಮಂಜುನಾಥ್ ಹಾಗೂ ಪ್ರಾಧ್ಯಾಪಕಿ ಡಾ.ಉಪಾದೇವಿ ಅವರನ್ನು ಅಭಿನಂದಿಸಲಾಯಿತು.
ಪ್ರಾಂಶುಪಾಲ ಪ್ರೊ ಎ.ಹೆಚ್.ಫರೋಖಿ, ಉಪನ್ಯಾಸಕರಾದ ಮುನಿನಾರಾಯಣಪ್ಪ, ಶಿವಮೂರ್ತಿ, ಗೋವಿಂದರೆಡ್ಡಿ, ಜಯರಾಂ ರೆಡ್ಡಿ, ಮುನಿಯಪ್ಪ, ರಾಮಕೃಷಪ್ಪ, ವಿಶ್ವೇಶ್ವರಯ್ಯ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

