ಯುವ ಮತದಾರರಿಂದ ಪ್ರಜಾಪ್ರಭುತ್ವ ಉಳಿವು
ಕೆಜಿಎಫ್: ಪ್ರಜಾಪ್ರಭುತ್ವವನ್ನು ಕಾಪಾಡಲು ಯುವ ಮತದಾರರಿಂದ ಮಾತ್ರ ಸಾಧ್ಯ ಎಂದು ನಗರಸಭಾ ಪೌರಾಯುಕ್ತ ವಿ. ಬಾಲಚಂದರ್ ಹೇಳಿದರು.
ಅವರು ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, 18 ವರ್ಷ ತುಂಬಿದ ಯುವ ಜನತೆ ತಮ್ಮ ಮತಗಳನ್ನು ಚಲಾಯಿಸುವ ಅಧಿಕಾರವನ್ನು ತೆಗೆದುಕೊಂಡ ನೇತಾರರು ಎಂದು ಹೇಳಿದರು. ದೇಶ ರಕ್ಷಿಸಲು ಹಾಗೂ ಉತ್ತಮ ಸಮಾಜವನ್ನು ರೂಪಿಸಲು ಯುವ ಜನತೆ ಒಬ್ಬ ಒಳ್ಳೆಯ ವ್ಯಕ್ತಿಯನ್ನು ಗುರುತಿಸಿ ಮತ ಹಾಕುವುದರಿಂದ ಈ ದೇಶವನ್ನು ಉಳಿಸಲು ಸಾಧ್ಯ ಎಂದರು.
ಮುಖ್ಯ ಅಥಿತಿಯಾಗಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪ್ರಭಾಕರರೆಡ್ಡಿ ಹಾಗೂ ರಾಬರ್ಟ್ಸನ್ಪೇಟೆ ಪೊಲೀಸ್ ಠಾಣಾ ಪಿಎಸ್ಐ ಎಲ್. ಆಂಜಪ್ಪ ಮಾತನಾಡಿ, 18 ವರ್ಷ ತುಂಬಿದ ಪ್ರತಿಯೊಬ್ಬರು ತಮ್ಮ ಹೆಸರನ್ನು ನೋಂದಾಯಿಸಿ ಮತ ಗುರುತಿನ ಚೀಟಿ ಪಡೆದು ಕಡ್ಡಾಯವಾಗಿ ಮತ ಚಲಾಯಿಸಲು ಮುಂದಾಗಬೇಕು ಎಂದರು.
ಇದೇ ವೇಳೆ 18 ವರ್ಷ ತುಂಬಿದ ವಿದ್ಯಾರ್ಥಿಗಳಿಗೆ, ಯುವಕ ಯುವತಿಯರಿಗೆ ಹಾಗೂ ಯುವ ಜನತೆಗೆ ಮತದಾನ ಮಾಡುವ ಗುರುತಿನ ಚೀಟಿಗಳನ್ನು ಪೌರಾಯುಕ್ತ ಬಾಲಚಂದರ್, ಉಪನ್ಯಾಸಕ ಪ್ರಭಾಕರರೆಡ್ಡಿ ಹಾಗೂ ಪಿಎಸ್ಐ ಎಲ್.ಆಂಜಪ್ಪ ವಿತರಿಸಿದರು. ಕಾರ್ಯಕ್ರಮದಲ್ಲಿ ಚುನಾವಣಾಧಿಕಾರಿ ಅಶ್ವತ್, ನಗರಸಭೆ ವ್ಯವಸ್ಥಾಪಕ ನಂಜುಂಡಪ್ಪ, ಅಧಿಕಾರಿ ಜಯರಾಂ ಸೇರಿದಂತೆ ಇತರೇ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

