ಸಾಮೂಹಿಕ ಪ್ರಾರ್ಥನೆ
ಶಿಡ್ಲಘಟ್ಟ: ಪಟ್ಟಣದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಮರು ಈದ್ ಮಿಲಾದ್ ಹಬ್ಬವನ್ನು ಶ್ರದ್ಧಾ ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಿದರು.
ಸಂಪ್ರದಾಯದಂತೆ ಇಲ್ಲಿನ ಐತಿಹಾಸಿಕ ಜಾಮೀಯಾ ಮಸೀದಿಯಿಂದ ದ್ವಿಚಕ್ರ ವಾಹನ ಮತ್ತು ಆಟೋಗಳನ್ನು ಹಸಿರು ಮತ್ತು ಹುಲಿವರ್ಣದ ಬಾವುಟಗಳೊಂದಿಗೆ ಸಿಂಗರಿಸಿಕೊಂಡು ಆಕರ್ಷಕ ಬೈಕ್ ರ್ಯಾಲಿ ನಡೆಸಿದರು. ಪಟ್ಟಣದ ಟಿ.ಬಿ. ರಸ್ತೆ, ಅಶೋಕ ರಸ್ತೆ, ಅಮೀರ್‌ಬಾಬಾ ದರ್ಗಾ, ಮಿನಿವಿಧಾನಸೌಧ ರಸ್ತೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಮದೀನಾ ಮಾದರಿ ಮತ್ತು ಅಜ್ಮೀರ್ ದರ್ಗಾದ ಮಾದರಿಯ ಸ್ತಬ್ಧಚಿತ್ರಗಳು ಜನರನ್ನು ಆಕರ್ಷಿಸಿದವು.
ಮೀಲಾದ್‌ಬಾಗ್ ಈದ್ಗಾ ಮೈದಾನದಲ್ಲಿ ಜಾಮೀಯಾ ಮಸೀದಿಯ ಧರ್ಮಗುರು ಅಲಹಾಜ್ ಸಲ್ಮಾನ್ ರಝಾ ಆರಫೀ ಅವರು ಪ್ರವಾದಿ ಮೊಹ್ಮದ್ ಪೈಗಂಬರ್ ಅವರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿ, ಇಡೀ ಜಗತ್ತಿನಲ್ಲಿ ಮಾನವೀಯ ಮೌಲ್ಯ ತಿಳಿಸುವ ಸಲುವಾಗಿ ಅವತರಿಸಿದ ಪ್ರವಾದಿ ಮೊಹ್ಮದ್ ಪೈಗಂಬರ್ ಅವರ ಆದರ್ಶಗಳು ಜಗತ್ತಿಗೆ ದಾರಿದೀಪವಾಗಿದ್ದು, ಶಾಂತಿ, ಸೌರ್ಹಾದತೆ ಮತ್ತು ಸಹಬಾಳ್ವೆಯಿಂದ ಕೂಡಿದ್ದು, ಅವರ ಮಾರ್ಗದರ್ಶನದಲ್ಲಿ ಬದುಕಬೇಕೆಂದು ಸಲಹೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

