ಕೋಲಾರ

'ಶಾಶ್ವತ ನೀರಾವರಿ ಅನುಷ್ಠಾನ ಜೆಡಿಎಸ್‌ನಿಂದ ಮಾತ್ರ ಸಾಧ್ಯ'

Published On :

ಬಂಗಾರಪೇಟೆ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಅನುಕೂಲ ಬೇಕಿದ್ದಲ್ಲಿ ಅದನ್ನು ಈಡೇರುಸುವುದು ಜೆಡಿಎಸ್‌ನಿಂದ ಮಾತ್ರ ಸಾಧ್ಯ ಎಂದು ಪಕ್ಷದ ಅಭ್ಯರ್ಥಿ ಘೋಷಣೆಯಾಗಿರುವ ಎಂ.ರಾಮಚಂದ್ರ ಹೇಳಿದರು. ಗಣರಾಜ್ಯೋತ್ಸವದ ಅಂಗವಾಗಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿನ ಒಳ ರೋಗಿಗಳಿಗೆ ಹಣ್ಣು ವಿತರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರಗಳು ಖಜಾನೆಯನ್ನು ಲೂಟಿ ಮಾಡಿ ಜನರ ಬದುಕನ್ನು ಮೂರಾಬಟ್ಟೆಯನ್ನಾಗಿ ಮಾಡಿದೆ. ಸುಭದ್ರ ಸರ್ಕಾರ ಮತ್ತೊಮ್ಮೆ ರಾಜ್ಯದಲ್ಲಿ ಸ್ಥಾಪನೆಯಾಗಬೇಕಾದರೆ ಅದು ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ನಿಂದ ಮಾತ್ರ ಸಾಧ್ಯ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಂತೆ. ಯಾವ ಸರ್ಕಾರ ಅಧಿಕಾರಕ್ಕೆ ಬಂದರೂ ರಾಜ್ಯವನ್ನು ಗಂಡಾಂತರದಿಂದ ಪಾರು ಮಾಡಲು ಆಗದು. ಈ ಸರ್ಕಾರಗಳು ಯಾವುದೇ ಜನಪರ ಯೋಜನೆ ರೂಪಿಸದೆ ಬರೀ ಬೆಣ್ಣೆ ಮಾತುಗಳನ್ನು ಮಾತ್ರ ಆಡುತ್ತಿದೆ ಎಂದು ಟೀಕಿಸಿದರು. ರಾಮಯ್ಯ, ಹೊಸೂರು ಕೃಷ್ಣಪ್ಪ, ರಂಗನಾಥ್, ರಮೇಶ್, ರಘುಪತಿಗೌಡ, ಇಂತಿಯಾಜ್, ಇರ್ಫಾನ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.