ಕೋಲಾರ

ತಮಿಳುನಾಡು ಕನ್ನಡ ವಿರೋಧಿ ನೀತಿ ವಿರುದ್ಧ ಪ್ರತಿಭಟನೆ

Published On :

ಕೆಜಿಎಫ್: ತಮಿಳುನಾಡು ಸರ್ಕಾರದ ಕನ್ನಡ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎಸ್.ಎನ್. ರಾಜಗೋಪಾಲಗೌಡ ಅವರ ನೇತೃತ್ವದಲ್ಲಿ ನಗರದ ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣಾ ಮುಂಭಾಗ ಪ್ರತಿಭಟನೆ ನಡೆಸಿದರು.
ತಮಿಳುನಾಡು ಸರ್ಕಾರ ಪದೇ ಪದೇ ಕಾವೇರಿ ನೀರಿನ ಸಮಸ್ಯೆ ಹಾಗೂ ಭಾಷಾ ವಿಚಾರದಲ್ಲಿ ತಗಾದೆ ತೆಗೆಯುತ್ತಿದೆ. ಆದರೆ, ರಾಜ್ಯದ ಗಡಿ ಭಾಗದಲ್ಲಿ ಕನ್ನಡ ಭಾಷೆ ಬದಲಿಗೆ ಪ್ರಥಮ ಭಾಷೆಯಾಗಿ ತಮಿಳು ಭಾಷೆ ಕಲಿಸುವ ನೀತಿ ರೂಪಿಸಿರುವ ತಮಿಳುನಾಡು ಸರ್ಕಾರದ ಕನ್ನಡ ವಿರೋಧಿ ಧೋರಣೆ ಖಂಡಿಸಿದರು.
ಕರ್ನಾಟಕ ರಾಜ್ಯದ ಗಡಿ ಭಾಗದಲ್ಲಿರುವ ಕನ್ನಡ ಪ್ರದೇಶಗಳಾದ ತಳವಾಡಿ ಹಾಗೂ ಗಡಿ ಭಾಗದ ಕನ್ನಡಿಗರಿಗೆ ಮಾರಕವಾದ ಕನ್ನಡ ಭಾಷಾ ವಿರೋಧಿ ನೀತಿ ರೂಪಿಸಿದ್ದು, ಕನ್ನಡದ ನಿರ್ನಾಮಕ್ಕೆ ಹೊರಟಿರುವ ತಮಿಳುನಾಡು ಸರ್ಕಾರ ಈಗ ಕನ್ನಡ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡದ ಬದಲಿಗೆ ತಮಿಳನ್ನು ಕಲಿಸಲು ಹೊರಟಿರುವುದು ಮುಂದೆ ಕನ್ನಡದ ವಿದ್ಯಾರ್ಥಿಗಳಿಗೆ ಮಾರಕವಾಗುತ್ತದೆ ಎಂದರು. ತಮಿಳುನಾಡು ಸರ್ಕಾರ ಘೋಷಿಸಿರುವ ಸದರಿ ಆದೇಶ ಕೂಡಲೇ ವಾಪಸ್ಸು ಪಡೆಯಬೇಕು, ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಒತ್ತಡ ತರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿ ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ವೆಂಕಟೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.