ಬೆಂಗಳೂರು ವ್ಯಕ್ತಿ ನೇಣಿಗೆ ಶರಣು
ಚಿಂತಾಮಣಿ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ನ ಕೆ. ವಿಜಯ್ ಅಲಿಯಾಸ್ ಕೃಷ್ಣಾರೆಡ್ಡಿ (26) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಈತ ನಗರದ ಕೆ.ಎಂ.ಡಿ ವಸತಿ ಗೃಹದಲ್ಲಿ ಸೋಮವಾರ ಬೆಳಗ್ಗೆ ರೂಮ್ ಪಡೆದಿದ್ದ. ಬೆಳಗ್ಗೆ ತಿಂಡಿ ತಿಂದು ನಂತರ ಸಂಜೆ ವೇಳೆಗೆ ನೇಣಿಗೆ ಶರಣಾಗಿರಬಹುದು ಎಂದು ಕೆ.ಎಂ.ಡಿ ವಸತಿ ಗೃಹದ ವ್ಯವಸ್ಥಾಪಕ ಮಹೇಶ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ವಿದ್ಯುತ್ ವ್ಯತ್ಯಯ
ಚಿಕ್ಕಬಳ್ಳಾಪುರ: ಚಿಂತಾಮಣಿ 220.66 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜನವರಿ 30 ರಂದು ತ್ರೈಮಾಸಿಕ ಪಾಲನ ಕಾಮಗಾರಿಯನ್ನು ಕೈಗೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಿಲಿದೆ. ಬಾಗೇಪಲ್ಲಿ ತಾಲೂಕಿನ ಚಾಕವೇಲು ರಾಶ್ಚೆರುವು, ಶಿವಪುರ, ಉಗ್ರಾಣಂಪಲ್ಲಿ, ಪುಲಗಲ್, ಜೂಲಪಾಳ್ಯ, ಆಚಗಾನಪಲ್ಲಿ, ಚೊಕ್ಕಂಪಲ್ಲಿ, ಮತ್ತು ಪೆದ್ದನಗುರ್ಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದುದರಿಂದ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕೆಂದು ಬೆವಿಕಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಬೆಂಕಿ ಹಚ್ಚಿಕೊಂಡು ಬಾಣಂತಿ ಆತ್ಮಹತ್ಯೆ
ಮಾಲೂರು: ಅನಾರೋಗ್ಯದಿಂದ ಬೇಸತ್ತ ಬಾಣಂತಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪುರ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ದೊಡ್ಡಕಡತೂರು ಗ್ರಾಮದ ಶ್ರೀನಿವಾಸ್ ಅವರ ಪತ್ನಿ ಅಶ್ವಿನಿ (24) ಆತ್ಮಹತ್ಯೆ ಮಾಡಿಕೊಂಡ ಬಾಣಂತಿ. ಹೆರಿಗೆಗಾಗಿ ತವರಿಗೆ ಬಂದಿದ್ದ ಅಶ್ವಿನಿಗೆ 2 ತಿಂಗಳ ಮಗು ಇದೆ. ಇವರಿಗೆ ಅನಾರೋಗ್ಯ ಕಾಡುತ್ತಿದ್ದರಿಂದ ಸೋಮವಾರ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮೃತಳ ಪೋಷಕರು ಹಾಗೂ ಪತಿ ಶ್ರೀನಿವಾಸ್ ನೀಡಿರುವ ದೂರಿನ ಅನ್ವಯ ಘಟನಾ ಸ್ಥಳಕ್ಕೆ ತಹಸೀಲ್ದಾರ್ ಹನುಮಂತರಾಯ, ಸಿಪಿಐ ಕೇಶವಮೂರ್ತಿ, ಎಸ್ಐ ಶಿವಸ್ವಾಮಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿ. ರವಿ ನೇಮಕ
ಚಿಂತಾಮಣಿ: ವಂದೇ ಮಾತರಂ ಸಂಘಟನೆಯ ಜಿಲ್ಲಾ ಅಧ್ಯಕ್ಷರಾಗಿ ವಿ.ರವಿ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಆರ್.ದೇವರಾಜು ಮತ್ತು ರಾಜ್ಯ ಉಪಾಧ್ಯಕ್ಷ ಹರಿಪ್ರಸಾದ್ ನಾಯಕ್ ಆದೇಶ ಹೊರಡಿಸಿದ್ದಾರೆ. ನಾಡು-ನುಡಿ ಸೇವೆ ಹಾಗೂ ಪುಣ್ಯಭೂಮಿ ಸೇವೆಯೇ ನಮ್ಮ ಧ್ಯೇಯ ಎನ್ನುವ ಘೋಷವಾಕ್ಯದೊಂದಿಗೆ ಸಂಘಟನೆಯನ್ನು ಜಿಲ್ಲಾದ್ಯಂತ ಬಲಪಡಿಸಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

