ಕೋಲಾರ

ಯೋಜನೆಗಳ ಸದುಪಯೋಗಕ್ಕೆ ಕಾರ್ಮಿಕರಿಗೆ ಕರೆ

Published On :

ಚಿಂತಾಮಣಿ: ಶ್ರಮ ಜೀವಿಗಳಾದ ಕಟ್ಟಡ ಕಾರ್ಮಿಕರ ಸೇವೆಯನ್ನು ಪರಿಗಣಿಸಿ ಸರ್ಕಾರ ಹಲವಾರು ಯೋಜನೆಗಳನ್ನು ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಹಿರಿಯ ವಕೀಲ ಎಸ್.ರಾಜಾರಾಂ ಕರೆ ನೀಡಿದರು.
ನಗರಸಭೆ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಮತ್ತು ಕಾರ್ಮಿಕ ಇಲಾಖೆ ನಗರಸಭೆಯ ಸಂಯುಕ್ತ ಆಶ್ರಯದಲ್ಲಿ ಗುತ್ತಿಗೆದಾರರು ಹಾಗೂ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರಿಗೆ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ದೊರೆಯುವ ಸೌಲತ್ತುಗಳ ಬಗ್ಗೆ ಉಪನ್ಯಾಸ ನೀಡಿದರು. ಗುತ್ತಿಗೆದಾರ ಸಮಸ್ಯೆ ಮತ್ತು ಕಟ್ಟಡ ಕಾರ್ಮಿಕರ ಸಮಸ್ಯೆ ಏನೇ ಭಿನ್ನಾಭಿಪ್ರಾಯ ಇದ್ದರೂ ಕಾನೂನು ಅಡಿಯಲ್ಲಿ ಬಗೆಹರಿಸಿಕೊಳ್ಳಲು ಕಿವಿಮಾತು ಹೇಳಿದರು.
ನಂತರ ನ್ಯಾಯಾಧೀಶ ಮುದಿಗೌಡರ್ ಮಾತನಾಡಿ, ಕಟ್ಟಡ ಕಾರ್ಮಿಕರು ಎದುರಿಸುವ ಹಲವಾರು ಸಮಸ್ಯೆಗಳಿಗೆ ಹಾಗೂ ಪರಿಹಾರಕ್ಕೆ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಸರ್ಕಾರ ದೊರೆಯುವ ಸವಲತ್ತು ಪಡೆದು ಇನ್ನಷ್ಟು ಅಭಿವೃದ್ಧಿ ಹೊಂದಲು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಕಾರ್ಮಿಕರಿಗೆ ಕಾನೂನು ಮಾಹಿತಿ ಹಾಗೂ ಅರಿವು ಬಗ್ಗೆ ಕಾರ್ಮಿಕ ನಿರೀಕ್ಷಕ ಟಿ.ಕೆ.ನೇತ್ರಪಾಲ ಹಾಗೂ ಹಿರಿಯ ವಕೀಲ ಜಿ.ಎಂ.ಇಬ್ರಾಹಿಂ ಪ್ರಾಸ್ತವಿಕವಾಗಿ ಮಾತನಾಡಿದರು.
ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶರಾದ ಎಸ್.ಜಿ.ಸಲಗರೆ, ಬಿ.ಸಿ.ಚಂದ್ರಶೇಖರ್, ನಗರಸಭೆ ಅಧ್ಯಕ್ಷೆ ನಾಗರತ್ನಮ್ಮ, ಉಪಾಧ್ಯಕ್ಷ ಚೌಡರೆಡ್ಡಿ, ಹಿರಿಯ ವಕೀಲರಾದ ಪಾಪರೆಡ್ಡಿ, ಬಿ.ಆರ್.ಪ್ರಭಾಕರ್ ಮತ್ತು ನಗರಸಭೆ ಅಧಿಕಾರಿಗಳಾದ ಚಕ್ರಪಾಣಿ, ಮಂಜುನಾಥ್ ಸೇರಿದಂತೆ ಇನ್ನೂ ಹಲವಾರು ವಕೀಲರು, ಕಾರ್ಮಿಕರು, ಗುತ್ತಿಗೆದಾರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.