ಕೋಲಾರ

ಶಾಸಕರ ಕೊಠಡಿ ಉದ್ಘಾಟಿಸಿದ ಕೃಷ್ಣಾರೆಡ್ಡಿ

Published On :

ಕ.ಪ್ರ.ವಾರ್ತೆ, ಚಿಂತಾಮಣಿ, ಜು.1
ಶಾಸಕರ ಕೊಠಡಿ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಧ್ಯಮ ಮಿತ್ರರಿಗೆ ಆಹ್ವಾನ ನೀಡದೆ ಅಧಿಕಾರಿಗಳು ನಗೆಪಾಟಲಿಗಳಿಗೆ ಈಡಾಗಿರುವ ಘಟನೆ ಸೋಮವಾರ ತಾಲೂಕು ಪಂಚಾಯ್ತಿಯಲ್ಲಿ ನಡೆದಿದೆ.
ತಾಪಂ ಕಾರ್ಯಾಲಯದಲ್ಲಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಅವರ ನೂತನ ಕೊಠಡಿ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಧ್ಯಮ ಮಿತ್ರರಿಗೆ ಆಹ್ವಾನಿಸಿರಲಿಲ್ಲ. ಈ ಬಗ್ಗೆ ಶಾಸಕರ ಬೆಂಬಲಿಗರಲ್ಲಿ ಅಸಮಾಧಾನ ಉಂಟಾಗಿ ನಗರಸಭಾ ಸದಸ್ಯ ಷಫೀಕ್ ಉದ್ದೀನ್ ಅಧಿಕಾರಿಗಳ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸಿದರು.
ತಾಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ರೆಡ್ಡಪ್ಪ ಕೂಡಲೇ ಎಚ್ಚೆತ್ತು ಅಧೀನ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸುವುದಾಗಿ ಹೇಳಿದ ರೆಡ್ಡಪ್ಪ ಅವರು, ಮಾಧ್ಯಮದವರಿಗೆ ಕ್ಷಮೆ ಯಾಚಿಸಿದರು.
ಬಳಿಕ ಆಗಮಿಸಿದ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಕೊಠಡಿ ಉದ್ಘಾಟನೆ ಕಾರ್ಯಕ್ರಮ ನೆರವೇರಿಸಿದರು. ವಾರದ ಮೂರು ದಿನಗಳಲ್ಲಿ ಇಲ್ಲಿ ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸಿ, ಕೆಲಸ ಮಾಡುವುದಾಗಿ ಹೇಳಿದರು.
ಪ್ರಥಮ ಆದ್ಯತೆ ಕುಡಿಯುವ ನೀರಿಗೆ ಎಲ್ಲೆಲ್ಲಿ ಅಭಾವವಿದೆಯೋ ಅಲ್ಲಲ್ಲಿ ಕೂಡಲೇ ಅಧಿಕಾರಿಗಳ ಜೊತೆ ಚರ್ಚಿಸಿ ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದೆಂದು ನುಡಿದರು.
ಈ ಸಂದರ್ಭ ನಗರಸಭಾ ಸದಸ್ಯರಾದ ಅಬ್ಬುಗುಂಡು ಶ್ರೀನಿವಾಸರೆಡ್ಡಿ, ಷಫೀಕ್ ಉದ್ದೀನ್, ಅಣ್ಣು, ಸಿ.ಎನ್. ಮಂಜುನಾಥ್, ಮುಖಂಡರಾದ ಪೆದ್ದೂರು ನಾಗರಾಜರೆಡ್ಡಿ, ಮಸಲಹಳ್ಳಿ ಮಂಜುನಾಥ್, ರಾಚಾಪುರ ಶ್ರೀನಿವಾಸ್, ದಿನ್ನಮಿಂದಪಲ್ಲಿ ಬೈರಾರೆಡ್ಡಿ, ವಿ.ಅಮರ್ ಸೇರಿದಂತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.