ಸಮಸ್ಯೆ ನಿವಾರಣೆಗೆ ಡಿಸಿ ಬಳಿ ನಿಯೋಗ
ಗುಡಿಬಂಡೆ: ತಾ.ಪಂ. ಅಧ್ಯಕ್ಷೆ ಆನಂದಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಹಲವಾರು ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನರಸರಾಜು, ತಮ್ಮ ಇಲಾಖೆಯಿಂದ ರೈತರಿಗೆ ರಿಯಾಯಿತಿ ದರದಲ್ಲಿ ಗೊಬ್ಬರ, ಬಿತ್ತನೆ ಬೀಜ, ಕೃಷಿ ಉಪಕರಣ ನೀಡಲಾಗುತ್ತಿದೆಯೆಂದು ಸಭೆಗೆ ತಿಳಿಸಿದರು.
ಶಿಕ್ಷಣ ಇಲಾಖೆಯಲ್ಲಿ 70 ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹಲವು ಹುದ್ದೆಗಳ ಕೊರತೆಯಿದ್ದು, ಇವುಗಳ ಭರ್ತಿಗಾಗಿ ಸಭೆ ಗಮನಹರಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ರವಿಕುಮಾರ್ ನುಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿದ್ದಲಿಂಗಪ್ಪ, 2007, 8ನೇ ಸಾಲಿನಿಂದ 2010,11ನೇ ಸಾಲಿನ ತನಕ ಒಟ್ಟು 1629 ಭಾಗ್ಯಲಕ್ಷ್ಮೀ ಬಾಂಡ್ಗಳನ್ನು ವಿತರಿಸಲಾಗಿದೆಯೆಂದು ತಿಳಿಸಿದರು.
ತಾಲೂಕಿನಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದ್ದು, ಸಮಸ್ಯೆ ನಿವಾರಣೆಗೆ ಜಿಲ್ಲಾಧಿಕಾರಿಗಳ ಬಳಿ ನಿಯೋಗ ತೆರಳಲು ಸಭೆ ನಿರ್ಧರಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಉಪಾಧ್ಯಕ್ಷ ಆದಿನಾರಾಯಣರೆಡ್ಡಿ ರಸಗೊಬ್ಬರ ವಿತರಕರು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಗೊಬ್ಬರ ಮಾರಾಟ ಮಾಡುತ್ತಿರುವ ವಿಷಯ ತಮ್ಮ ಗಮನಕ್ಕೆ ಬಂದಿದೆ. ಆದ್ದರಿಂದ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೇಳಿದರು. ನಂತರ ಸಭೆಯಲ್ಲಿ ತಾ.ಪಂ. ಕಚೇರಿಯಲ್ಲಿ ಗೌರವ ಧನದ ಆದಾರದ ಮೇಲೆ ಕೆಲ ಸಿಬ್ಬಂದಿಗೆ ವೇತನ ಹೆಚ್ಚಳ ಮಾಡುವ ಪ್ರಸ್ತಾಪ, ರೆಡ್ಕ್ರಾಸ್ ನಿಧಿಗೆ ದೇಣಿಗೆ ನೀಡಿಕೆ, ನಾಮ ನಿರ್ದೇಶಿತ ಸದಸ್ಯರ ನಾಮಕರಣ ಸೇರಿ ಹಲವು ವಿಷಯಗಳಿಗೆ ಅನುಮೋದನೆ ನೀಡಲಾಯಿತು. ಉಳಿದಂತೆ ರೇಷ್ಮೆ ಇಲಾಖೆ, ತೋಟಗಾರಿಕೆ, ಜಲಾನಯನ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ತಾವು ಸಾಧಿಸಿರುವ ಪ್ರಗತಿಯ ಬಗ್ಗೆ ಸಭೆಯಲ್ಲಿ ವಿವರಿಸಿದರು.
ತಾ.ಪಂ. ಮಾಜಿ ಉಪಾಧ್ಯಕ್ಷ ನಾರಾಯಣಸ್ವಾಮಿ, ಇಒಇಂದ್ರೇಶ್, ಸದಸ್ಯರಾದ ಗಂಗಾಧರಪ್ಪ, ದೇವರಾಜು, ಮುನಿರೆಡ್ಡಿ, ಕಚೇರಿ ಲೆಕ್ಕಾಧಿಕಾರಿ ತಿಪ್ಪೇಸ್ವಾಮಿ ಸೇರಿದಂತೆ ಹಲವರು ಸಭೆಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

