ಕೋಲಾರ

ನಾಗರಕುಂಟೆ ಜೀರ್ಣೋದ್ಧಾರಕ್ಕೆ ಜಿಲ್ಲಾ ಯುವ ಬಿಜೆಪಿ ಒತ್ತಾಯ

Published On :

ಕೋಲಾರ: ಪುರಾಣ ಪ್ರಸಿದ್ಧ ನಗರದ ಕಠಾರಿಪಾಳ್ಯದ ನಾಗರಕುಂಟೆಯ ಅಭಿವೃದ್ಧಿ ಕಾಮಗಾರಿ ಸ್ಥಗಿತಗೊಂಡಿದ್ದು ಕೂಡಲೇ ಕಾಮಗಾರಿ ಪುನರಾರಂಭಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಬುಧವಾರ ಅಪರ ಹಾಗೂ ಜಿಲ್ಲಾ ಪ್ರಭಾರ ಜಿಲ್ಲಾಧಿಕಾರಿ ಡಾ. ವೆಂಕಟೇಶಮೂರ್ತಿ ಅವರಿಗೆ ಮನವಿ ಸಲ್ಲಿಸಲಾಯಿತು.
ಕಳೆದ ವರ್ಷ ಜಿಲ್ಲಾಧಿಕಾರಿ ಡಾ.ಡಿ.ಎಸ್. ವಿಶ್ವನಾಥ್ ಅವರು ಎಲ್ಲ ಇಲಾಖೆಗಳ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ನಾಗರಕುಂಟೆಯ ಸ್ವಚ್ಛತಾ ಕಾರ್ಯಕ್ಕಾಗಿ ಶ್ರಮದಾನ ಶಿಬಿರ ನಡೆಸಿ ಕಾಮಗಾರಿಗೆ ಚಾಲನೆ ನೀಡಿದ್ದರು. ಆದರೆ ಕಾರಣಾಂತರಗಳಿಂದ ಕೆಲಸ ನಿಂತಿರುವುದರಿಂದ ಮತ್ತೆ ನಾಗರಕುಂಟೆ ಕಸದ ತೊಟ್ಟಿಯಾಗುತ್ತಿರುವುದರಿಂದ ಕೂಡಲೇ ಕಾಮಗಾರಿ ಆರಂಭಿಸಬೇಕೆಂದು ಬಿಜೆಪಿ ನಿಯೋಗ ಒತ್ತಾಯಿಸಿತು.
ಮನವಿ ಪತ್ರ ನೀಡುವಾಗ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಓಂ ಶಕ್ತಿ ಚಲಪತಿ, ವಕೀಲ ನರಸಿಂಹ, ಮುಖಂಡರಾದ  ಜಾಮಿನ್, ಓಇಲೇಶ್, ಕೀಲುಕೋಟೆ ರವಿ, ಮಂಜು, ವಿಘ್ನೇಶ್, ಅಶೋಕ್ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.